ರಾಯಚೂರು

ಅಧಿಕಾರಿಗಳಿಂದ 'ಮಿಂಚಿನ ಸಂಚಾರ'

Published On :

ರಾಯಚೂರು:  ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಒಳಗೊಂಡಂತೆ ಕ್ಷೇತ್ರ ಶಿಕ್ಷಣಾಧಿಕಾರಿ,  ಉಪಸಮನ್ವಯಾಧಿಕಾರಿಗಳು ಸೇರಿದಂತೆ ಜಿಲ್ಲೆಯಲ್ಲಿ 7 ತಂಡಗಳನ್ನು ರಚಿಸಿ ಜಿಲ್ಲೆಯ ವಿವಿಧ ಶಾಲೆಗಳಿಗೆ ಮಿಂಚಿನ ಸಂಚಾರದ ಮೂಲಕ ಭೇಟಿ ನೀಡಲಾಯಿತು.
ಮಿಂಚಿನ ಸಂಚಾರವನ್ನು ನ.28ರಂದು ಕೈಗೊಂಡು ಸಿಂಧನೂರು ತಾಲೂಕಿನ 72 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ, ಮಕ್ಕಳ ಹಾಜರಾತಿ, ಕಲಿಕಾ ಗುಣಮಟ್ಟ, ಶಾಲೆಗಳ ಮೂಲಭೂತ ಸೌಕರ್ಯಗಳ ಕುರಿತು ತಪಾಸಣೆ, ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಅನುಷ್ಟಾನ ಕುರಿತು ಪರಿಶೀಲಿಸಲಾಯಿತು.
ಶಾಲೆಗೆ ಗೈರು ಹಾಜರಾದ 30 ಜನ ಶಿಕ್ಷಕರಿಗೆ ಸ್ಥಳದಲ್ಲಿಯೇ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಯಿತು. ಅವರಿಂದ ಲಿಖಿತ ಹೇಳಿಕೆ ಪಡೆಯುವ ಜತೆಗೆ ಅವರ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ತಂಡ ಸೂಚನೆ ನೀಡಿತು ಎಂದು ಉಪನಿರ್ದೇಶಕರು (ಆಡಳಿತ) ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.