ಕೃಷ್ಣಾ ನ್ಯಾಯಾಧಿಕರಣ ತೀರ್ಪಿಗೆ ರೈತ ಸಂಘ ಹರ್ಷ
ಲಿಂಗಸ್ಗೂರು: ರಾಜ್ಯದ ಕಾನೂನು ಹೋರಾಟಕ್ಕೆ ಐತಿಹಾಸಿಕ ಗೆಲವು ದೊರೆತಿರುವ ಆಲಮಟ್ಟಿ ಅಣೆಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಕೃಷ್ಣಾ ನ್ಯಾಯ ಮಂಡಳಿ ನೀಡಿದ ತೀರ್ಪು ರೈತರಿಗೆ ಸಂದ ಜಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಹರ್ಷ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷ್ಣಾ ನದಿ ನೀರಿನ ವಿವಾದ ಇತ್ಯರ್ಥ ಪಡಿಸಲು ನೇಮಕಗೊಂಡ ನ್ಯಾಯಮೂರ್ತಿ ಬ್ರಿಜೇಶ್ಕುಮಾರ್ ನೇತೃತ್ವದ ನ್ಯಾಯ ಮಂಡಳಿ ಆಲಮಟ್ಟಿ ಅಣೆಕಟ್ಟೆ ಎತ್ತರ 519.6 ಮೀಟರ್ನಿಂದ 524.256 ಮೀಟರ್ಗೆ ಎತ್ತರಿಸಲು ಕೃಷ್ಣಾ ನ್ಯಾಯ ಮಂಡಳಿ ಹಸಿರು ನಿಶಾನೆ ತೋರುವ ಮೂಲಕ ಆಂಧ್ರಪ್ರದೇಶ ಸಲ್ಲಿಸಿದ್ದ ಅರ್ಜಿ ವಜಾ ಮಾಡಿರುವುದು ರೈತರ ಬಹುದಿನದ ಹೋರಾಟಕ್ಕೆ ಜಯ ದೊರೆತಿದೆ. ಆದರೆ 4 ಟಿಎಂಸಿ ನೀರು ಕೃಷ್ಣಾ ನದಿಯಿಂದ ಆಂಧ್ರಪ್ರದೇಶಕ್ಕೆ ಹರಿಸುವ ವಿಚಾರ ಅಸಮಾಧಾನ ತಂದಿದೆ ಎಂದರು.
ಕೃಷ್ಣಾ ಕೊಳ್ಳದ ಎಲ್ಲ ಕ್ಷೇತ್ರಗಳ ಶಾಸಕರು ಮತ್ತು ಸಂಸದರು ಎಚ್ಚೆತ್ತುಕೊಂಡು ಈ ಭಾಗದ ನೀರಾವರಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದು ತೀವ್ರಗತಿಯಲ್ಲಿ ಆಸಕ್ತಿ ತೋರಬೇಕು. ಅಲ್ಲದೆ ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು. ಕೃಷ್ಣಾ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ನೀರಾವರಿ ಕಲ್ಪಿಸುವುದು ಇದು ಸಕಾಲ. ಇಲ್ಲದಿದ್ದರೆ ರೈತರಿಗೆ ಅನ್ಯಾಯವಾಗಲಿದೆ ಎಂದು ಹೇಳಿದರು.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕೆಂದು ರೈತರು ನಡೆಸುತ್ತಿರುವ ಹೋರಾಟದ ಸಮಯದಲ್ಲಿ ರೈತ ವಿಠಲ್ ಅರಬಾವಿ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯ ಸರ್ಕಾರದ ವಿಳಂಬ ನೀತಿಯೇ ಕಾರಣವೆಂದು ರಾಜ್ಯಪಾಲರು ರೈತರ ಪರವಾಗಿ ಹೇಳಿಕೆ ನೀಡಿರುವುದು ಅಭಿನಂದನಾರ್ಹ.
ದುರಸ್ತಿಗೆ ಬಿಡಿಗಾಸಿಲ್ಲ: ನಾರಾಯಣಪುರ ಎಡದಂಡೆ ಕಾಲುವೆ ದುರಸ್ತಿಗೆ 4100 ಕೋಟಿ ಬಿಡುಗಡೆ ಮಾಡಿದ್ದು, ಆದರೆ ಬಲದಂಡೆ ಕಾಲುವೆ ತೀರಾ ಹದಗೆಟ್ಟಿದ್ದರೂ ದುರಸ್ತಿಗೆ ಸರ್ಕಾರ ನಯಾಪೈಸೆ ಬಿಡುಗಡೆ ಮಾಡದಿರುವುದು ಖಂಡನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

