ರಾಯಚೂರು

ನಾಡು, ನುಡಿ ರಕ್ಷಣೆಗೆ ವಿದ್ಯಾರ್ಥಿ ಸಮೂಹ ಮುಂದಾಗಲಿ

Published On :

ಲಿಂಗಸ್ಗೂರು:  ಕನ್ನಡ ನಾಡು-ನುಡಿ ರಕ್ಷಣೆಗೆ ವಿದ್ಯಾರ್ಥಿ ಸಮೂಹ ಮುಂದಾಗಬೇಕೆಂದು ಕರ್ನಾಟಕ ವಿಶ್ವ ವಿದ್ಯಾಲಯದ (ಮೌಲ್ಯಮಾಪನ) ಕುಲಸಚಿವ ಡಾ.ಎಚ್.ಟಿ. ಪೋತೆ ಕರೆ ನೀಡಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಸಂಘ ಉದ್ಘಾಟಿಸಿ, ಕನ್ನಡ ನಾಡಿನಲ್ಲಿ ಜನಿಸಿದ ನಾವುಗಳು ಜನ್ಮ ನೀಡಿದ ತಂದೆ-ತಾಯಿ ಹಾಗೂ ಹಿರಿಯರನ್ನು ಗೌರವಿಸಬೇಕು. ಭಾಷಾಂಧತೆ, ಮತಾಂಧತೆ ಮರೆತು ಅನ್ಯ ಭಾಷೆ, ಜಾತಿ, ಮತ ಪ್ರೀತಿಸುವ ಮೂಲಕ ಎಲ್ಲರ ಜೊತೆ ಬಾಂಧವ್ಯ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಸಾಹಿತಿ ಡಿ.ಎಚ್. ಕಂಬಳಿ ಮಾತನಾಡಿ, ಕನ್ನಡ ಭಾಷೆ, ನೆಲ, ಜಲ ಉಳಿಸುವಲ್ಲಿ ಎಲ್ಲ ರಾಜಕೀಯ ಪಕ್ಷಗಳ ವಿಫಲತೆ ಎದ್ದು ಕಾಣುತ್ತಿದೆ. ಕನ್ನಡ ಭಾಷೆಯೇ ಉಸಿರು ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಪ್ರಾಚಾರ್ಯ ಡಾ.ಸಿ.ಬಿ. ಚಿಲ್ಕಾರಾಗಿ ಮಾತನಾಡಿ, ಕಾಲೇಜಿನ ಪ್ರತಿ ವಿಭಾಗದಲ್ಲೂ ಇಂತಹ ಕಾರ್ಯಗಾರ ನಡೆದರೆ ಸೃಜನಶೀಲತೆಗೆ ಅವಕಾಶ ಕಲ್ಪಿಸಿದಂತಾಗಲಿದೆ. ಕನ್ನಡ, ನಾಡು, ನುಡಿ, ಜಲ ರಕ್ಷಣೆ ಜೊತೆಗೆ ಯುವ ಬರಹಗಾರರಿಗೆ ಕನ್ನಡ ಸಾಹಿತ್ಯ ಸಂಘ ವೇದಿಕೆಯಾಗಲಿದೆ ಎಂದರು. ಸಾಹಿತ್ಯ ಸಂಘದ ಕಾರ್ಯಾಧ್ಯಕ್ಷ ಮಹಾಂತಗೌಡ ಪಾಟೀಲ್, ಉಪನ್ಯಾಸಕರಾದ ಡಾ.ಮಹಾದೇವಪ್ಪ, ಹುಲುಗಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.