ರಾಯಚೂರು

ಮಕ್ಕಳ ಸಂಸತ್ ರಚನೆಯಿಂದ ಸಮಸ್ಯೆಗೆ ಪರಿಹಾರ ಸಾಧ್ಯತೆ'

Published On :

ರಾಯಚೂರು: ಮಕ್ಕಳ ಸಂಸತ್ ರಚನೆಯಿಂದ ಜಿಲ್ಲೆಯಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಗಮನ ಸೆಳೆದು ವಿಧಾನಸೌಧದಲ್ಲಿ ವಿಷಯ ಪ್ರಸ್ತಾಪಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವೀಣಾ ಪಲ್ಲಕಿ ಹೇಳಿದರು.
ನಗರದಲ್ಲಿ ಶನಿವಾರ ಹಾಷ್ಮಿಯಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಯುನಿಸೆಫ್ನ ಮಕ್ಕಳ ಹಕ್ಕು ಸಂರಕ್ಷಣೆ ಯೋಜನೆಯಡಿ ಆಯೋಜಿಸಿದ್ದ ಮಕ್ಕಳ ಸಂಸತ್ ಜಿಲ್ಲಾ ಮಟ್ಟದ ಸಮಾಲೋಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಜ್ಞಾನ ಮೂಡಿಸುವ ಮೂಲಕ ಅವರ ಭವಿಷ್ಯದ ಬಗ್ಗೆ ಚಿಂತಿಸುವ ಶಕ್ತಿ ತುಂಬಬೇಕಿದೆ. ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ನಿಟ್ಟಿನಲ್ಲಿ ಸಮಾಜದ ಸಹಕಾರ ಅವಶ್ಯಕ ಎಂದರು.
ಪರಿಹಾರ ಚಿಂತನೆ: ಮಕ್ಕಳು ಇಂದಿನ ದಿನಮಾನದಲ್ಲಿ ಹತ್ತಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ವಿಧಾನಸಭೆಯಲ್ಲಿ ಮಕ್ಕಳ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚೆ ನಡೆಯದಿರುವ ಬಗ್ಗೆ ವಿಷಾದಿಸಿ, ಮಕ್ಕಳು ತಮ್ಮ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಗಮನ ಸೆಳೆಯಬೇಕೆಂದು ಸಲಹೆ ನೀಡಿದರು.
ಮಾಹಿತಿ ಕೊರತೆ: ಯುನಿಸೆಫ್ನ ಮಕ್ಕಳ ಹಕ್ಕು ಸಂರಕ್ಷಣೆ ಯೋಜನೆಯ ಅಧಿಕಾರಿ ರಾಘವೇಂದ್ರ ಭಟ್ ಮಾತನಾಡಿ, ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಮಕ್ಕಳ ಸಮಸ್ಯೆಗಳ ಬಗ್ಗೆ ಶಾಸಕರು ಕೇವಲ 98 ಪ್ರಶ್ನೆಗಳನ್ನು ಕೇಳಿದ್ದರು. ಆ ಪೈಕಿ ಜಿಲ್ಲೆಯಿಂದ ಎರಡು ಪ್ರಶ್ನೆಗಳಿದ್ದವು. ಇದು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿಯ ಕೊರತೆಯಿದೆ ಎಂಬುದನ್ನು ಸ್ಪಷ್ಟಪಡಿಸಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ 80ಕ್ಕೂ ಹೆಚ್ಚು ಮಕ್ಕಳು ಮಕ್ಕಳ ಸಂಸತ್ ಸಮಾಲೋಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.