29ರಿಂದ ಅಂತರ್ ವಿವಿ ಯುವಜನೋತ್ಸವ
ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಅ.29ರಿಂದ 3 ದಿನಗಳ ಕಾಲ ಅಂತರ್ ಮಹಾವಿದ್ಯಾಲಯ ಯುವಜನೋತ್ಸವ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಚಲನಚಿತ್ರ ಕಲಾವಿದ ಡಾ. ರಾಜೇಶ ಉದ್ಘಾಟಿಸಲಿದ್ದಾರೆ ಎಂದು ಗುಲ್ಬರ್ಗ ವಿವಿ ಉಪ ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ತಿಳಿಸಿದರು.
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗಾಗಿ ವಾದ್ಯ ಸಂಗೀತ, ಪಾಶ್ಚಿಮಾತ್ಯ ಸಂಗೀತ, ಹಾಡುಗಾರಿಕೆ, ಶಾಸ್ತ್ರೀಯ ಹಾಗೂ ಜಾನಪದ ನೃತ್ಯಗಳು, ಮೂಕಾಭಿನಯ, ಅನುಕರಣೆ, ಪ್ರಹಸನ, ಏಕಾಂಕ ನಾಟಕ, ಪೇಂಟಿಂಗ್, ಕಾರ್ಟೂನಿಂಗ್, ಕ್ಲೇಮಾಡಲ್, ರಂಗೋಲಿ, ರಸಪ್ರಶ್ನೆ, ಚರ್ಚಾ ಸ್ಪರ್ಧೆ, ವಾಕ್ಪಟುತ್ವ, ಛಾಯಾಚಿತ್ರ ಸ್ಪರ್ಧೆಗಳಂಥಹ ಒಟ್ಟು 25 ಬಗೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಹೈ-ಕ 4 ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಈಗಾಗಲೇ 25 ಕಾಲೇಜುಗಳಿಂದ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸುವ ಮಾಹಿತಿ ಲಭ್ಯವಾಗಿದೆ. ಕಾರ್ಯಕ್ರಮದ ಉದ್ಘಾಟನೆ ದಿನದಂದು ಆಗಮಿಸುವ ವಿದ್ಯಾರ್ಥಿಗಳನ್ನು ಸಹ ನೋಂದಾಯಿಸಿಕೊಳ್ಳಲಾಗುವುದು ಎಂದರು.
ಯುವಜನೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಲು ಒಟ್ಟು 18 ಸಮಿತಿಗಳನ್ನು ರಚಿಸಲಾಗಿದೆ. ಯುಜನೋತ್ಸವದ ಸಮಾರೋಪ ಸಮಾರಂಭ ಅ.31ರಂದು ನಡೆಯಲಿದೆ. ರಂಗಭೂಮಿ ಮತ್ತು ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲ್ಬರ್ಗದ ಎಸ್ಬಿಎಚ್ ಉಪ ಮಹಾಪ್ರಬಂಧಕ ರವಿಂದ್ರ ಕುಮಾರ್ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

