ರಾಯಚೂರು

ಮುದಗಲ್ನಲ್ಲಿ ಮಳೆ; ಅಸ್ತವ್ಯಸ್ತ

Published On :

ಮುದಗಲ್: ಪಟ್ಟಣದಲ್ಲಿ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡು ಪರದಾಡುವ ಸ್ಥಿತಿ ನಿರ್ಮಾವಾಗಿದೆ. ಹಗಲು- ರಾತ್ರಿ ಎನ್ನದೆ ಮಳೆ ಸುರಿಯುತ್ತಿದ್ದರಿಂದ ಪಟ್ಟಣದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇನ್ನು ಕೆಲ ರಸ್ತೆಗಳು ಕೆಸರುಗದ್ದೆಗಳಾಗಿ ಪರಿವರ್ತನೆಗೊಂಡಿವೆ. ಪೊಲೀಸ್ ಠಾಣೆಯಿಂದ ಮಸ್ಕಿ ಕೂಡು ರಸ್ತೆ, ಬಾಗಲಕೋಟೆ ರಸ್ತೆಯಿಂದ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣದಿಂದ ಬಾಗಲಕೋಟೆ ಮುಖ್ಯರಸ್ತೆಗಳಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
ತರಕಾರಿ ಮಾರುಕಟ್ಟೆ ಜಲಾವೃತ: ಇತ್ತ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಚರಂಡಿಗಳು ತುಂಬಿ ತುಳುಕುತ್ತಿದ್ದು ಚರಂಡಿ ನೀರು ರಸ್ತೆಗಳ ಮೇಲೆ ಹರಿದು ರಸ್ತೆಗಳೇ ಚರಂಡಿಗಳಾಗಿ ಪರಿವರ್ತನೆಗೊಂಡಿವೆ. ರಸ್ತೆಯಲ್ಲಿ ಸಂಚರಿಸುವವರು ಮೈಮೇಲೆ ಕೆಸರು ಎರಚಿಕೊಳ್ಳುವ ಸ್ಥಿತಿ ಬಂದಿದೆ. ಸತತ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ ಜಲಾವೃತಗೊಂಡು ನೀರು ಹರಿದು ಹೋಗಲಾರದೆ ನಿಂತಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತು ಬೆಳೆದ ಬೆಳೆ ಸಜ್ಜೆ, ಸೂರ್ಯಕಾಂತಿ, ಎಳ್ಳು ಮುಂತಾದ ಬೆಳೆಗಳನ್ನು ಒಣಗಿಸಲಾರದೆ, ಮಳೆಯಲ್ಲೇ ಬಿದ್ದಿವೆ. ರೈತರು ಬೆಳೆದ ಹತ್ತಿ, ಸೂರ್ಯಕಾಂತಿ ಬೆಳೆಗಳು ತೇವಾಂಶ ಹೆಚ್ಚಾಗಿ ಬೆಳೆ ನಾಶವಾಗುವ ಹಂತ ತಲುಪಿದೆ. ರೈತರು ಜಮೀನುಗಳಿಗೆ ಹೋಗದಂತಾಗಿದೆ. ಗ್ರಾಮೀಣ ರಸ್ತೆಗಳಂತೂ ಹಾಳಾಗಿವೆ ಎನ್ನಲಾಗಿದೆ.

ನಾಳೆ ಕಾರ್ಯಕಾರಿ ಸಮಿತಿ ಸಭೆ
ರಾಯಚೂರು: ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಅ.29 ರಂದು ಕರೆ
ಯಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಬಸವರಾಜ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅ.29 ರಂದು ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಅಧ್ಯಕ್ಷತೆಯಲ್ಲಿ ಈ ಸಭೆಯು ನಡೆಯಲಿದ್ದು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಸದಸ್ಯರು ಸೇರಿ ಪಕ್ಷದ ಎಲ್ಲ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.

ನಾಳೆ ಸಭೆ
ರಾಯಚೂರು: ಸರ್ವಶಿಕ್ಷಣ ಅಭಿಯಾನ ಯೋಜನೆ ಅಡಿ ಅ.29 ರಂದು ನಗರದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ಜಿಲ್ಲೆಯಲ್ಲಿ ಶಾಲೆಗಳಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.29 ರಂದು ಬೆಳಗ್ಗೆ 11ಕ್ಕೆ ನಗರದ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಪ್ರಮುಖರ ಸಭೆ ಕರೆಯಲಾಗಿದೆ ಎಂದು ಡಿಡಿಪಿಐ ಕಚೇರಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.