ಮಂಗಳಮುಖಿಯರಿಗೆ ಕಾನೂನು ಅರಿವಿರಲಿ: ನ್ಯಾ.ಬಿಎಸ್.ಆರ್
ಸಿಂಧನೂರು: ಮಂಗಳಮುಖಿಯರಿಗೆ ಕಿರುಕುಳ ನೀಡುವುದು, ದೌರ್ಜನ್ಯ ಎಸಗುವುದು ಕೇಳಿಬರುತ್ತದೆ. ದೌರ್ಜನ್ಯ ಪ್ರಕರಣಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲು ಮಾಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ರಾಯಣ್ಣನವರ ಹೇಳಿದರು.
ವಕೀಲರ ಸಂಘದ ಸಭಾಂಗಣದಲ್ಲಿ ಮಂಗಳವಾರ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಏರ್ಪಡಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಲ ನೈಸರ್ಗಿಕ ಕಾರಣಗಳಿಂದ ಸಮಾಜದಲ್ಲಿ ಮಂಗಳಮುಖಿಯರಾಗಿ ಬದುಕುತ್ತಿರುವ ವ್ಯಕ್ತಿಗಳನ್ನು ಗೌರವದಿಂದ ಎಲ್ಲರೂ ಕಾಣಬೇಕು. ಅವರಿಗೆ ಕಾನೂನಿನ ಅವಶ್ಯಕತೆ ಬಿದ್ದಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ನೀಡಲಾಗುವುದು ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ. ರಮ್ಯಾ ದೀಪಿಕಾ, ಸಹಾಯಕ ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆಪ್ತಮಿತ್ರ ಸಂಸ್ಥೆಯ ಸಂಯೋಜಕ ತಿಮ್ಮಪ್ಪ ನಾಯಕ, ಸಮುದಾಯ ಸಂಘಟನೆಯ ಬಿ.ವಂದನಾ, ಹುಲಿಗೆಮ್ಮ, ಕರ್ನಾಟಕ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮುಖಂಡರಾದ ವೀರೇಶ ನಾಯ್ಕ, ಮಹಿಬೂಬ, ಕುಮಾರಮ್ಮ ಮತ್ತಿತರರು ಉಪಸ್ಥಿತರಿದ್ದರು. ಆಪ್ತಮಿತ್ರ ಸಂಸ್ಥೆಯ ಅಧ್ಯಕ್ಷ ಮೌಲಾಲಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

