ಎನ್ನೆಸ್ಸೆಸ್ ವಿದ್ಯಾರ್ಥಿ ಭವಿಷ್ಯಕ್ಕೆ ಬುನಾದಿ: ನ್ಯಾ.ರಾಯಣ್ಣವರ್
ಸಿಂಧನೂರು: ಗಾಂಧೀಜಿ ಕನಸಿನ ಕೂಸಾದ ಎನ್ನೆಸ್ಸೆಸ್ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ರಾಯಣ್ಣವರ ಹೇಳಿದರು.
ತಾಲೂಕಿನ ಹೊಸಳ್ಳಿಕ್ಯಾಂಪಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಕೇತ ಕಾಲೇಜಿನವರು ಏರ್ಪಡಿಸಿದ್ದ ಎನ್ನೆಸ್ಸೆಸ್ ಶಿಬಿರದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೂ ಕಾನೂನು ಅವಶ್ಯಕ. ಸಾಮಾನ್ಯ ಕಾನೂನುಗಳ ಮಹತ್ವ, ಔಚಿತ್ಯವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ತಾಲೂಕು ಕಾನೂನು ಸೇವಾ ಸಮಿತಿ ವಿದ್ಯಾರ್ಥಿಗಳಿಗೆ ಕಾನೂನುಗಳನ್ನು ತಿಳಿಸಿಕೊಡಲು ಪ್ರತಿ ಕಾಲೇಜಿನಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ತಮ್ಮ ಪಾಲಕರಿಗೂ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಎಪಿಪಿ ಶೇಖರಪ್ಪ ಶಾಲಿಗನೂರು, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಭೀಮನಗೌಡ ಮಾತನಾಡಿದರು. ಉಪನ್ಯಾಸಕರಾದ ಚನ್ನಮಲ್ಲಿಕಾರ್ಜುನ, ರಾಮಲಿಂಗಯ್ಯ ಇದ್ದರು.
ಉಪನ್ಯಾಸಕ ಉಮಾಪತಿ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಪ್ರಾರ್ಥಿಸಿ, ಅಕ್ಷತಾ ಕುಲಕರ್ಣಿ ಎನ್ಎಸ್ಎಸ್ ಗೀತೆ ಹಾಡಿದರು. ಸುಮಾ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

