ಪ್ರತಿ ತಿಂಗಳು ಕಾರ್ಯಕಾರಿ ಸಮಿತಿ ಸಭೆ ನಡೆಸಿ
ರಾಯಚೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪಕ್ಷದ ನಗರ ಘಟಕದ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್, ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಪ್ರತಿ ತಿಂಗಳು ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸುವ ಮೂಲಕ ಪಕ್ಷವನ್ನು ಕೆಳಮಟ್ಟದಿಂದ ಸಂಘಟಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ಬ್ಲಾಕ್ ಅಧ್ಯಕ್ಷರಿಗೆ ಈ ಬಗ್ಗೆ ಸೂಚಿಸಿದ್ದು, ಅವರು ಶೀಘ್ರದಲ್ಲಿಯೇ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಿದ್ದಾರೆ. ಪಕ್ಷದ ಸದಸ್ಯತ್ವ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಎಲ್ಲ ಬ್ಲಾಕ್ ಅಧ್ಯಕ್ಷರುಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಸಲಹೆ ನೀಡಿದರು.
ಮಾಜಿ ಶಾಸಕ ಪಾಪಾರೆಡ್ಡಿ ಮಾತನಾಡಿ, ಲೋಕಸಭೆ ಚುನಾವಣೆಯ ಹಿನ್ನೆಲೆ ಎಲ್ಲರೂ ಸಂಘಟಿತರಾಗಿ ಪಕ್ಷದ ಅಭ್ಯರ್ಥಿ ಗೆಲವಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ತಾಲೂಕಿನ ಗಡಿಭಾಗದ ಗ್ರಾಮಗಳಿಗೆ ನೀರಾವರಿ ಸೌಲಭ್ಯ ದೊರೆಯುವಂತಾಗಲು ರಾಜ್ಯ ಜಲಸಂಪನ್ಮೂಲ ಸಚಿವರ ಮೇಲೆ ಒತ್ತಡ ಹೇರಲು ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು.
ಸಭೆಯಲ್ಲಿ ನವಾಬ್ ಸಾಬ್ ಚೌದ್ರಿ, ಜಿ. ಶಿವಮೂರ್ತಿ, ತಾಯಣ್ಣ ನಾಯಕ, ಜಿಂದಪ್ಪ, ಉಮೇಶ್ ಬಳಿಗಾರ್, ಅಮರೇಗೌಡ ಹಂಚಿನಾಳ, ದರೂರು ಬಸವರಾಜ ಪಾಟೀಲ್, ಈಶಪ್ಪ, ಇ.ಶಶಿರಾಜ್, ಎಂ.ಕೆ. ಬಾಬರ್ ಸೇರಿ ಅನೇಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

