ರಾಯಚೂರು

ಲಿಂಗಸ್ಗೂರು: ಮಕ್ಕಳ ಸಮೀಕ್ಷೆ; ಸಹಕಾರಕ್ಕೆ ಮನವಿ

Published On :

ಲಿಂಗಸ್ಗೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವ ಹಾಗೂ ಕುಟುಂಬ ಸಮೀಕ್ಷೆ ಕಾರ್ಯ ನಡೆಯಲಿದ್ದು ಜನಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಣ ಪ್ರೇಮಿಗಳು ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೀರಡಗಿ ಮನವಿ ಮಾಡಿದ್ದಾರೆ.
2013- 14ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ನ.6ರಿಂದ 7ರ ವರೆಗೆ ಶಾಲಾ ಸಮೀಕ್ಷೆ ಕಾರ್ಯ ಮತ್ತು ನ.13ರಿಂದ 17ರವರೆಗೆ ಕುಟುಂಬ ಸಮೀಕ್ಷೆ ಕಾರ್ಯ ತಾಲೂಕಿನಾದ್ಯಂತ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ, ಎಲ್ಲ ಜನವಸತಿ ಪ್ರದೇಶಗಳಲ್ಲಿ ನಡೆಯಲಿದೆ.
ಸಮೀಕ್ಷೆ ಕಾರ್ಯಕ್ಕೆ ಇಬ್ಬರು ಶಿಕ್ಷಕರು, ಒಬ್ಬ ಎನ್‌ಜಿಒ ಪ್ರತಿನಿಧಿ, ಒಬ್ಬ ಇತರೆ ಇಲಾಖೆಯವರನ್ನು ಒಳಗೊಂಡ 4 ಜನರ ತಂಡ ರಚಿಸಲಾಗುತ್ತದೆ. ಒಟ್ಟು 394 ತಂಡಗಳು ಶಾಲೆ ಹಾಗೂ ಜನವಸತಿ ಪ್ರದೇಶಗಳಲ್ಲಿ ಸಮೀಕ್ಷೆ ಕಾರ್ಯ ನಡೆಸಲಾಗುವುದು. ಕಾರಣ ಸಮೀಕ್ಷೆ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.