ಆರ್ಥಿಕ ಸ್ವಾವಲಂಬನೆ ಸಾಧಿಸಿ: ಶೈಲಜಾ
ಕನ್ನಡಪ್ರಭ ವಾರ್ತೆ , ಸಿಂಧನೂರು , ಅ.30
ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಲು ತರಬೇತಿಗಳು ಪೂರಕ. ಇವುಗಳ ಪ್ರಯೋಜನ ಪಡೆದು ಸ್ವಯಂ ಉದ್ಯೋಗ ಕಂಡುಕೊಳ್ಳಬೇಕು ಎಂದು ರಾಯಚೂರಿನ ಎಸ್‌ಬಿಎಚ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ಶೈಲಜಾ ಕರೆ ನೀಡಿದರು.
ತಾಲೂಕಿನ ಬಳಗಾನೂರು ದೇವಾಂಗ ಸಮುದಾಯ ಭವನದಲ್ಲಿ ರಾಯಚೂರಿನ ಎಸ್‌ಬಿಎಚ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಸ್ವತಂತ್ರವಾಗಿ ಜೀವನ ಸಾಗಿಸಲು, ಸ್ವಂತ ಉದ್ಯೋಗ ಹೊಂದಲು, ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಪರಿಣಿತಿ ಹೊಂದಿ ಬ್ಯಾಂಕುಗಲು ಮತ್ತು ಸರ್ಕಾರದ ಸೌಲಭ್ಯ ಪಡೆದು ಉದ್ಯೋಗ ಆರಂಭಿಸಿ ಯಶಸ್ವಿಯಾಗುವಂತೆ ಸಲಹೆ ನೀಡಿದರು.
ಕಾರ್ಯಕ್ರಮ ಕುರಿತು ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಡಾ. ಎಸ್.ಎಸ್. ಜಾಗೀರದಾರ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ನಿರ್ದೇಶಕ ಮಾನಪ್ಪ ದಾಸರ, ಕೃಷಿ ಪತ್ತಿನ ಸಹಕಾರಿ ಸಂಘದ ನಿಯಮಿತದ ಅಧ್ಯಕ್ಷ ರಾಘವೇಂದ್ರರಾವ್ ಕುಲಕರ್ಣಿ ಶಿಬಿರ ಕುರಿತು ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಗುತ್ತೇದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ತಾಪಂ ಸದಸ್ಯೆ ಬಾಲಮ್ಮ ನಾಗಪ್ಪ, ನೇಕಾರರ ಒಕ್ಕೂಟದ ಯುವ ಅಧ್ಯಕ್ಷ ಬಸವರಾಜ ಕರಡಕಲ್, ಗ್ರಾಪಂ ಸದಸ್ಯೆ ಶ್ರೀದೇವಿ ಕಮ್ಮಾರ, ಹಿರಿಯ ಛಾಯಾಗ್ರಾಹಕ ಕೃಷ್ಣ, ಪತ್ರಕರ್ತ ಹನುಮೇಶ ಕಮ್ಮಾರ, ಶಿಬಿರಾರ್ಥಿಗಳು ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

