ರಾಯಚೂರು

ಆರೋಗ್ಯವಂತ ಶಿಕ್ಷಕರಿಂದ ಶೈಕ್ಷಣಿಕ ಪ್ರಗತಿ: ಯೋಗೇಶ್

Published On :

ಲಿಂಗಸ್ಗೂರು: ಶಿಕ್ಷಕರು ಉತ್ತಮ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹದಿಂದ ಶಿಕ್ಷಣ ನೀಡಲು ಸಾಧ್ಯ ಎಂದು ಸಹಾಯಕ ಆಯುಕ್ತ ಟಿ. ಯೋಗೇಶ್ ಸಲಹೆ ನೀಡಿದರು.
ಪಟ್ಟಣದ ಪಪೂ ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಸಂಘದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಕ್ರಿಕೆಟ್ ಟೂರ್ನಮೆಂಟ್‌ನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಧನಾತ್ಮಕ, ಸಕಾರಾತ್ಮಕ ಆಲೋಚನೆ ಹೊಂದಲು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದರು.
ತಾಲೂಕಿನ ಪ್ರತಿ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕರು ಆಟದ ಮೈದಾನ ಇರುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಆಯಾ ಶಾಲೆಗಳ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಆಟದ ಮೈದಾನ ಪಡೆಯಲು ಗಮನಹರಿಸಬೇಕು ಎಂದರು.
ತಾಪಂ ಇಒ ವೀರಭದ್ರಪ್ಪ, ಪಿಎಸ್‌ಐ ಸಿದ್ಧರಾಮಯ್ಯ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಪ್ಪ, ನೌಕರರ ಸಂಘದ ಕಾರ್ಯದರ್ಶಿ ಗುರುಸಂಗಯ್ಯ ಗಣಾಚಾರಿ, ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಮೂಲಿಮನಿ, ಬಿಇಒ ಕಚೇರಿ ವ್ಯವಸ್ಥಾಪಕ ಎನ್.ಬಿ. ಮಾಲಿ ಪಾಟೀಲ್, ಹಾಜಿಬಾಬು ಸೇರಿದಂತೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.