ರಾಯಚೂರು

'ಲೀಗಲ್ ಕ್ಲಿನಿಕ್ ಬಳಕೆಯಾಗಲಿ'

Published On :

ಕನ್ನಡಪ್ರಭ ವಾರ್ತೆ ಟಿ ಸಿಂಧನೂರು ಟಿ ಸೆ.1
ನಗರದ ದುದ್ದುಪುಡಿ ಮಹಿಳಾ ಕಾಲೇಜಿನ ಎನ್ನೆಸ್ಸೆಸ್ ಘಟಕ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಶನಿವಾರ ಪೀಡನೆ ವಿರೋಧಿ ಕಾನೂನು ನೆರವು ಸಪ್ತಾಹ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಭಾರತಿ ರಾಯಣ್ಣನವರ್, ಕಾನೂನಿನ ಅಡಿಯಲ್ಲಿ ಮಹಿಳೆಯರು ಹೇಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ವಿವರಿಸಿದರು.
ಯಾರು ಅನೈತಿಕ ಮಾರ್ಗದಲ್ಲಿ ನಡೆಯುತ್ತಾರೋ ಅವರಿಗೆ ಕಾನೂನಿನಲ್ಲಿ ಶಿಕ್ಷೆ ಇದ್ದೇ ಇದೆ. ಅದರ ಕುರಿತು ತಿಳಿವಳಿಕೆಯನ್ನು ನೀಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅದಕ್ಕಾಗಿಯೇ ಸ್ಥಳೀಯ ನ್ಯಾಯಾಲಯದಲ್ಲಿ ಲೀಗಲ್ ಕ್ಲಿನಿಕ್ ಆರಂಭಿಸಲಾಗಿದೆ. ಮಹಿಳೆಯರು, ನಿರಾಶ್ರಿತರು, ತಮ್ಮ ಮೇಲೆ ನಡೆಯುವ ದೌರ್ಜನ್ಯ, ದಬ್ಬಾಳಿಕೆ ಮತ್ತು ಹಿಂಸೆ ಹತ್ತಿಕ್ಕಲು ಅಗತ್ಯ ಕಾನೂನಿನ ನೆರವು ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರು ಅಗತ್ಯವಾದ ಕಾನೂನಿನ ಕುರಿತು ತಿಳಿದುಕೊಳ್ಳುವುದಲ್ಲದೆ ಇತರರಿಗೆ ತಿಳಿಸುವ ಕಾರ್ಯದಲ್ಲಿ ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ ವಹಿಸಿದ್ದರು. ಸರ್ಕಾರಿ ಸಹಾಯಕ ಅಭಿಯೋಜಕರಾದ ಶೇಖರಪ್ಪ ಶಾಲಿಗನೂರು, ಹಿರಿಯ ವಕೀಲರಾದ ಕೆ.ಅಮರೇಗೌಡ, ಜಿ.ಎಸ್.ಆರ್.ಕೆ. ರೆಡ್ಡಿ ಕಾಲೇಜು ಕಾರ್ಯದರ್ಶಿ ಆರ್.ಸಿ. ಪಾಟೀಲ್ ಎನ್ನೆಸ್ಸೆಸ್ ಅಧಿಕಾರಿ ಅಶೋಕ ಮಸ್ಕಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸರಿತಾ ಮತ್ತು ಶಿವಗಂಗಾ ನಿರೂಪಿಸಿದರು. ಜ್ಯೋತಿ ಪೂಜಾರಿ ಪ್ರಾರ್ಥಿಸಿದರು. ಶ್ರೀದೇವಿ ರಾಠೋಡ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.