ರಾಯಚೂರು

ಅಭಿವೃದ್ಧಿಗೆ ಆರ್ಥಿಕ ಕೊರತೆಯಿಲ್ಲ

Published On :

ದೇವದುರ್ಗ: ತಾಲೂಕಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಹಣಕಾಸಿನ ನೆರವು ಒದಗಿಸಲಿದ್ದು, ಅನುದಾನದ ಕೊರತೆಯಿಲ್ಲ ಎಂದು ಶಾಸಕ ವೆಂಕಟೇಶ ನಾಯಕ ಹೇಳಿದರು.
ತಾಲೂಕಿನ ಬಿ. ಗಣೇಕಲ್ ಗ್ರಾಮದಲ್ಲಿ ಸೋಮವಾರ ಕೃಷ್ಣಾ ಭಾಗ್ಯ ಜಲ ನಿಗಮದ ವಿಶೇಷ ಘಟಕ ಯೋಜನೆಯಡಿ ಸಿಸಿ ರಸ್ತೆ, ಎಸ್ಟಿ ಬಾಲಕರ ವಸತಿ ನಿಲಯ ಮತ್ತಿತರೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ತಾಲೂಕಿನಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿದೆ. ಶೀಘ್ರ ನೇಮಕಾತಿ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. 371ನೇ ಕಲಂ ಅಡಿ ವಿಶೇಷ ಸ್ಥಾನಮಾನದ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆಯೇ ನೇಮಕಾತಿ ನಡೆಯಲಿದೆ ಎಂದು ಹೇಳಿದರು.
ತಾಲೂಕಿನ ಅಭಿವೃದ್ಧಿಗೆ ಯೋಜನೆಗಳನ್ನು ಘೋಷಿಸುವ ಜತೆಗೆ ಅನುದಾನದ ಸಮರ್ಪಕ ಬಳಕೆಗೆ ಹೆಚ್ಚಿನ ಗಮನಹರಿಸಲಾಗುತ್ತದೆ. ಗುಣಮಟ್ಟದ ಕಾಮಗಾರಿಗಳ ಮೂಲಕ ಅಭಿವೃದ್ಧಿಯತ್ತ ತಾಲೂಕನ್ನು ಕೊಂಡೊಯ್ಯುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದರು.
ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮನಗೌಡ ನಾಗಡದಿನ್ನಿ ಮಾತನಾಡಿದರು. ಅರಕೇರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸ್ಸಯ್ಯ ಶಾಖೆ, ಗಲಗ ಜಿಪಂ ಸದಸ್ಯ ಶಿವಣ್ಣ ತಾತಾ, ತಾಪಂ ಸದಸ್ಯ ಸತ್ಯನಾರಾಯಣ ಗೌಡ, ಗೋವಿಂದಮ್ಮ, ಗಣೇಕಲ್ ಗ್ರಾಪಂ ಅಧ್ಯಕ್ಷೆ ಶಿವಲಿಂಗಮ್ಮ ಬೋವಿ, ಉಪಾಧ್ಯಕ್ಷ ಬಸವರಾಜ ಹೊಸಮನಿ, ರಾಮನಗೌಡ ಕರಡಿಗುಡ್ಡ, ಗಂಗಪ್ಪಯ್ಯ ಪೂಜಾರಿ, ಶರಣಗೌಡ ಗಣೇಕಲ್, ರಾಚಣ್ಣ ಅಬಕಾರಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.