ರಾಯಚೂರು

ಹೊಸ ಪಿಂಚಣಿ ಯೋಜನೆ ಕೈಬಿಡಲು ಆಗ್ರಹಿಸಿ ಮನವಿ

Published On :

ಸಿಂಧನೂರು:   ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ನೌಕರರ ಒಕ್ಕೂಟ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿತು.
ನಿವೃತ್ತ ವೇತನ ಎಂಬುದು ಕಾನೂನುಬದ್ಧವಾಗಿದ್ದು ಹೊಸ ಪಿಂಚಣಿ ಯೋಜನೆಯು ನೌಕರರಿಗೆ ಮಾರಕವಾಗಿ ಪರಿಣಮಿಸಲಿದೆ. ನಿವೃತ್ತ ವೇತನವು ನೌಕರನ ನಿವೃತ್ತಿ ನಂತರದ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ನೀಡುವುದಾಗಿದೆ. ಇದಕ್ಕಾಗಿ ಸರ್ಕಾರ ಹಿಂದೆ ಆಯೋಜಿಸಿದ್ದ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಬೇಕು. ಲಾಭಕೋರರಿಗೆ ಅನುಕೂಲವಾಗುವ ಷೇರು ಮಾರುಕಟ್ಟೆಯಲ್ಲಿ ಜೂಜಾಟವಾಡುವ ಆಧಾರಿತ ಅನಿಶ್ಚಿತ ಹೊಸ ಪಿಂಚಣಿ ಯೋಜನೆಯನ್ನು ಸರ್ಕಾರ ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ನೌಕರರು ಮನವಿಯಲ್ಲಿ ಒತ್ತಾಯಿಸಿದರು.
ಒಕ್ಕೂಟದ ಗೌರವಾಧ್ಯಕ್ಷ ಚಂದ್ರಶೇಖರ ಕಗ್ಗೋಡ, ಅಧ್ಯಕ್ಷ ದೊಡ್ಡನಗೌಡ ಗುಂಜಳ್ಳಿ, ಪ್ರಧಾನ ಕಾರ್ಯದರ್ಶಿ ಶೇಖರಪ್ಪ ಜಾಲಿಹಾಳ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಮರಯ್ಯ ಪತ್ರಿಮಠ, ರಾಜ್ಯ ಸದಸ್ಯ ಎಂ.ಡಿ.ಮೌಲಸಾಬ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.