ರಾಯಚೂರು

ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಕ್ರಮ: ಎಸ್ಪಿ

Published On :

ಕನ್ನಡಪ್ರಭ ವಾರ್ತೆ ,  ರಾಯಚೂರು ,  ಆ.3
ಕಾನೂನು ಸುವ್ಯವಸ್ಥೆ ಪಾಲನೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆ, ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಆದ್ಯತೆ. ಉತ್ತಮ ಆಡಳಿತ, ಅಪರಾಧ ತಡೆಗೆ ಬಿಗಿ ಕ್ರಮ.
-ನಗರದಲ್ಲಿ ಮಂಗಳವಾರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಎಂ.ಎನ್. ನಾಗರಾಜ ಅವರ ಭರವಸೆಗಳಿವು.
ಸಾಮರಸ್ಯ ಕಾಪಾಡಲು ಕ್ರಮ: ಅಧಿಕಾರ ವಹಿಸಿಕೊಂಡ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ಸಮಾಜದಲ್ಲಿನ ಎಲ್ಲ ಕೋಮಿನವರ ಮಧ್ಯೆ ಸಾಮರಸ್ಯ ಕಾಪಾಡಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಈಗಾಗಲೇ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವಂತೆ ಸೂಚಿಸಿದ್ದು, ಅದರನ್ವಯ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಜನಪರಗೊಳಿಸುವ ಕಾರ್ಯ ಮಾಡುವುದಾಗಿ ತಿಳಿಸಿದ ಅವರು, ಮಹಿಳೆಯರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಅಪರಾಧ ತಡೆಗೆ ಬಿಗಿಕ್ರಮ: ರಾತ್ರಿ ಪಹರೆ ಬಿಗಿಗೊಳಿಸುವುದು, ಆಂಧ್ರದ ಗಡಿಯಲ್ಲಿರುವ ಜಿಲ್ಲೆಯೊಳಕ್ಕೆ ಅಕ್ರಮ ನುಸುಳುವಿಕೆ, ಅಪರಾಧ ಚಟುವಟಿಕೆ ತಡೆಗೆ ಜಿಲ್ಲಾ ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಲಾಗುತ್ತದೆ. ಲೋಕಾಯುಕ್ತ, ಎಸ್ ಟಿಎಫ್, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಮಾಣ ತಡೆಗೆ ಎಲ್ಲ ರೀತಿಯ ಬಿಗಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಅಧಿಕಾರ ಹಸ್ತಾಂತರ: ಇದಕ್ಕೂ ಮುಂಚೆ ಎಸ್ಪಿಯಾಗಿದ್ದ ಎಸ್.ಬಿ. ಬಿಸನಳ್ಳಿ ಅವರು ನೂತನ ಎಸ್ಪಿ ಎಂ.ಎನ್. ನಾಗರಾಜ ಅಧಿಕಾರ ಹಸ್ತಾಂತರಿಸಿದರು. ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.