ರಾಯಚೂರು

ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ: ನೂರ್‌ಬಾಷಾ

Published On :

ಮುದಗಲ್: ಶಾಲಾ- ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯೂ ಅಷ್ಟೇ ಮುಖ್ಯವಾಗಿವೆ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯಕರ ವಾತಾವರಣವನ್ನು ಕಾಣಬಹುದಾಗಿದೆ ಎಂದು ಮುದಗಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ನೂರಬಾಷಾ ಹೇಳಿದರು.
ಸಮೀಪದ ಕನ್ನಾಪೂರಹಟ್ಟಿಯ ಕೇಂದ್ರೀಯ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದ 24ನೇ ವಿಭಾಗೀಯ ಬಾಸ್ಕೆಟ್‌ಬಾಲ್ ಮೀಟ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶ ವಿಶೇಷ ಸಂಸ್ಕೃತಿ, ಗೌರವದ ದೇಶವಾಗಿದೆ. ಶಿಕ್ಷಣದಲ್ಲಿ ಯುನಿವರ್ಸಿಟಿ ಸೇರಿದಂತೆ ವಿವಿಧ ಹಂತಗಳಲ್ಲಿ ರಾಜ್ಯ ಮಟ್ಟದ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳನ್ನು ನಡೆಯಲಿವೆ. ಉತ್ತಮ ಕ್ರೀಡಾಪಟು ಕ್ರೀಡಾ ಮನೋಭಾವನೆಯಿಂದ ಮುನ್ನುಗ್ಗಿದಾಗ ಯಶಸ್ಸು ಸಾಧ್ಯ. ಕ್ರೀಡೆಯಲ್ಲಿ ದೈಹಿಕವಾಗಿ ಶಕ್ತಿಯನ್ನು ಉಪಯೋಗಿಸದೇ ಚಾಣಾಕ್ಷತನ ಕೂಡ ಪರಿಣಾಮಕಾರಿಯಾಗಿ ಉಪಯೋಗವಾಗಲಿದೆ ಎಂದರು.
ಕ್ರೀಡಾಕೂಟವನ್ನು ಲಿಂಗಸ್ಗೂರಿನ ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಶಿವಬಸಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಿ ಮೌಖಿಕವಾಗಿ ಘೋಷಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಪ್ರಾಚಾರ್ಯ ಶಶಿಧರನ್ ಸ್ವಾಗತಿಸಿದರು. ಉಪ ಪ್ರಾಚಾರ್ಯ ರವಿಕುಮಾರ, ಪಿಟಿಸಿ ಅಧ್ಯಕ್ಷ ಲಿಂಗಪ್ಪ ಪರಂಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.