ರಾಯಚೂರು

ಮೌಲ್ಯಯುಕ್ತ ಬೋಧನೆ ಅವಶ್ಯ: ಉಸ್ಮಾನಅಲಿ

Published On :

ಸಿಂಧನೂರು: ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಲಿ ಎಂದು ನಿವೃತ್ತ ಶಿಕ್ಷಕ ಉಸ್ಮಾನಅಲಿ ಸಲಹೆ ನೀಡಿದರು.
ವಾಸವಿ ನಗರದ ನೂತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು. ಡಾ. ರಾಧಾಕೃಷ್ಣ ದೇಶದ ರಾಷ್ಟ್ರಪತಿಯಾದರೂ ತಮ್ಮ ಮೂಲ ವೃತ್ತಿಯಾಗಿದ್ದ ಶಿಕ್ಷಕ ವೃತ್ತಿಯನ್ನು ಕೊನೆಯವರೆಗೂ ಗೌರವಿಸಿದರು. ಆ ಕಾರಣಕ್ಕಾಗಿ ತಮ್ಮ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಕರು ಮಹೋನ್ನತ ವಿಚಾರಗಳನ್ನು, ನೈತಿಕ ತಳಹದಿಯ ಮೇಲೆ ಬೋಧಿಸಬೇಕು. ಎಲ್ಲ ಧರ್ಮಗಳ ವಿಚಾರಗಳನ್ನು ಮಕ್ಕಳಿಗೆ ತಿಳಿಹೇಳಬೇಕು ಎಂದರು.
ನಿವೃತ್ತ ಶಿಕ್ಷಕ ಕೃಷ್ಣಾಚಾರ್ಯ ಬಳಗಾನೂರ ಮಾತನಾಡಿ, ಇಂದು ಶಿಕ್ಷಣ ಗುಣಮಟ್ಟ ಕಡಿಮೆಯಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣಗೊಳ್ಳುತ್ತಿವೆ. ಶಿಕ್ಷಕರು ದುರಭ್ಯಾಸಗಳನ್ನು ರೂಢಿಸಿಕೊಳ್ಳದೆ, ಕೇವಲ ಸಂಬಳಕ್ಕಾಗಿ ದುಡಿಯದೆ ಮಕ್ಕಳ ಅಭ್ಯುದಯಕ್ಕಾಗಿ ಶ್ರಮಿಸಲಿ ಎಂದು ಹೇಳಿದರು.
ನೂತನ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ವೆಂಕಣ್ಣಾಚಾರ ದೋಟಿಹಾಳ, ಕಾರ್ಯದರ್ಶಿ ಪ್ರಹ್ಲಾದ ಗುಡಿ, ಆಡಳಿತಾಧಿಕಾರಿ ಮನೋಹರರಾವ್ ಕುಲಕರ್ಣಿ, ಪದಾಧಿಕಾರಿಗಳಾದ ಎಂ.ಕೆ. ಗೌರಕರ್, ಜಿ.ವಿ. ಜೋಷಿ, ವೆಂಕಟೇಶ ಕೆಂಗಲ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಆರ್.ಸಿ. ಹಿರೇಮಠ ಪಾಲ್ಗೊಂಡಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಆರ್.ವಿ. ಜೋಷಿ ವಹಿಸಿ ಮಾತನಾಡಿದರು. ಶಿಕ್ಷಕಿ ಪ್ರಭಾ ಗುಡಿ ಅನಿಸಿಕೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಶಿಕ್ಷಕರಾದ ಕೃಷ್ಣಾಚಾರ್ಯ ಬಳಗಾನೂರ, ಉಸ್ಮಾನಅಲಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.