ರಾಯಚೂರು

'ಕಲಿಕೆಗಾಗಿ ಮಾತೃಭಾಷೆ ಮರೆಯದಿರಿ'

Published On :

ಕನ್ನಡಪ್ರಭ ವಾರ್ತೆ, ಮುದಗಲ್, ಸೆ.6
ಬಾಸ್ಕೆಟ್‌ಬಾಲ್ ಕ್ರೀಡೆ ದೇಹಕ್ಕೆ ಪರಿಶ್ರಮದ ಕೆಲಸ ನೀಡಿ ಉತ್ತಮ ಆರೋಗ್ಯಕ್ಕೆ ಪೂರಕವಾಗಿದೆ ಎಂದು ಲಿಂಗಸ್ಗೂರು ಶಾಸಕ ಮಾನಪ್ಪ ವಜ್ಜಲ ಹೇಳಿದರು.
ಪಟ್ಟಣದ ಕನ್ನಾಪೂರಹಟ್ಟಿ ಕೇಂದ್ರೀಯ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದ ಹೈದ್ರಾಬಾದ್ ವಲಯ ಮಟ್ಟದ ಬಾಸ್ಕೆಟ್‌ಬಾಲ್ ಕ್ರೀಡಾಕೂಟದ ಮುಕ್ತಾಯ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದ ಅವರು, ಸರ್ಕಾರದ ಪುರಸ್ಕೃತ ಶಿಕ್ಷಣ ಸಂಸ್ಥೆಯಾಗಿದ್ದರಿಂದ ಹಿಂದಿ ಮತ್ತು ಆಂಗ್ಲ ಭಾಷೆಯೇ ಇಲ್ಲಿಯ ಕಲಿಕಾ ಭಾಷೆಯಾಗಿದೆ. ನಾವು ಕನ್ನಡಿಗರು ನಮ್ಮ ಮಾತೃ ಭಾಷೆ ಕನ್ನಡವಾಗಿದೆ. ಕಲಿಕಾ ಭಾಷೆ ಯಾವುದಾದರೇನೂ ಕನ್ನಡವನ್ನು ಮರೆಯದಿರಿ ಎಂದರು.
ಮುಖ್ಯಅತಿಥಿ ಸಹಾಯಕ ಆಯುಕ್ತ ಟಿ.ಯೋಗೇಶ ಮಾತನಾಡಿದರು. ಪ್ರಾಚಾರ್ಯ ಶಶಿಂದ್ರನ್, ಉಪ ಪ್ರಾಚಾರ್ಯ ರವಿಕುಮಾರ, ವೀರನಗೌಡ ಲೆಕ್ಕಿಹಾಳ ಉಪಸ್ಥಿತರಿದ್ದರು. ಶಿಕ್ಷಕ ಪ್ರದೀಪ್‌ಕುಮಾರ, ರಣಧೀವೆ, ಬಸವರಾಜ ಕಾರ್ಯಕ್ರಮ ನಡೆಸಿಕೊಟ್ಟರು.

ಜೆಎನ್‌ವಿ ಕ್ರೀಡಾಂಗಣ ಅಭಿವೃದ್ಧಿಗೆ ಮನವಿ
ಮುದಗಲ್:  ಕೇಂದ್ರೀಯ ಜವಾಹರ ನವೋದಯ ವಿದ್ಯಾಲಯಕ್ಕೆ ಕ್ರೀಡಾಂಗಣದ ಅಭಿವೃದ್ಧಿ ಹಾಗೂ ಇನ್ನುಳಿದ ಸಮಸ್ಯೆಗಳ ನಿವಾರಣೆಗೆ ಅನುದಾನ ಬಿಡಗಡೆಗೊಳಿಸಲು ಸಂಸ್ಥೆಯ ಪಾಲಕರ ಪ್ರತಿನಿಧಿಗಳ ಸಂಘದಿಂದ ಲಿಂಗಸ್ಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಜವಾಹರ ನವೋದಯ ವಿದ್ಯಾಲಯವು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತಿದ್ದು, ಎಲ್ಲ ತಾಲೂಕಿನ ಮಕ್ಕಳು ಈ ಶಾಲೆಯಲ್ಲಿ ಓದುತ್ತಿದ್ದಾರೆ. ಜಿಲ್ಲೆಯ ಎಲ್ಲ ವಿಧಾನಸಭಾ ಸದಸ್ಯರು ಅನುದಾನ ನೀಡಿ ಕ್ರೀಡಾಂಗಣ ಮತ್ತು ಸಂಸ್ಥೆಯನ್ನು ಅಭಿವೃದ್ಧಿಪಡಿಸುವುದು ತಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂಘದ ಅಧ್ಯಕ್ಷ ಲಿಂಗಪ್ಪ ಪರಂಗಿ ತಿಳಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.