ರಾಯಚೂರು

ದೇವದುರ್ಗ ಪುರಸಭೆ ಕಮಲ ತೆಕ್ಕೆಗೆ

Published On :

ಕನ್ನಡಪ್ರಭ ವಾರ್ತೆ, ದೇವದುರ್ಗ, ಸೆ.6
ಸ್ಥಳೀಯ ಪುರಸಭೆಯ ನೂತನ ಅಧ್ಯಕ್ಷರಾಗಿ ಫಕೀರಸಾಬ್(ಫಕ್ರುದ್ದೀನ್) ಗೌರಂಪೇಟ್ ಹಾಗೂ ಉಪಾಧ್ಯಕ್ಷರಾಗಿ ನಾಗಪ್ಪ ಉಪ್ಪಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನಿಗದಿತ ಸಮಯಕ್ಕೆ ಎರಡೂ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯನ್ನು ತಹಸೀಲ್ದಾರ್ ಹಾಗೂ ಚುನಾವಣೆ ಅಧಿಕಾರಿ ಬಸಲಿಂಗಪ್ಪ ನಾಯಿಕೋಡಿ ಘೋಷಿಸಿದರು.
ಅವರಿರೋಧ ಆಯ್ಕೆ: ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಆಯ್ಕೆ ಪ್ರಕ್ರಿಯೆಯ ವೇಳೆ ಅಧ್ಯಕ್ಷ ಸ್ಥಾನಕ್ಕೆ ಫಕೀರಸಾಬ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗಪ್ಪ ಉಪ್ಪಾರ ಮಾತ್ರ ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಸ್ಥಾನಕ್ಕೆ ರಂಗಪ್ಪ ನಾಯಕ ಸೂಚಕರಾಗಿ, ಹೇಮಣ್ಣ ನಾಯಕ ಅನುಮೋದಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಹನುಮೇಶ ನಾಯಕ ಸೂಚಕರಾಗಿ, ಯಶೋಧಾ ಸಿದ್ಧಯ್ಯ ಸ್ವಾಮಿ ಅನುಮೋದಿಸಿದರು.
ಬಲಾಬಲ: ಪುರಸಭೆಯ 23 ಸದಸ್ಯರಲ್ಲಿ ಬಿಜೆಪಿ 17 ಸ್ಥಾನ ಗಳಿಸಿದ್ದು ಸ್ಪಷ್ಟ ಬಹುಮತ ಹೊಂದಿದೆ. ಐವರು ಕಾಂಗ್ರೆಸ್ ಹಾಗೂ 1 ಜೆಡಿಎಸ್ ಸದಸ್ಯರಿದ್ದಾರೆ. ನಿರೀಕ್ಷೆಯಂತೆ ಪುರಸಭೆ ಆಡಳಿತ ಬಿಜೆಪಿ ವಶವಾಗಿದೆ.
ಗೊಂದಲ: ಮೀಸಲಾತಿಗೆ ಸಂಬಂಧಿಸಿ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ವಿಚಾರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಗೊಂದಲಕ್ಕೆ ದಾರಿಯಾಯಿತು.
ತಡೆಯಾಜ್ಞೆ ಆದೇಶದ ಪ್ರತಿ ತಮಗೆ ತಲುಪಿಲ್ಲ. ಹೀಗಾಗಿ ಚುನಾವಣೆ ಪ್ರಕ್ರಿಯೆಗೆ ಯಾವುದೇ ಅಡಚಣೆಯಿಲ್ಲ ಎಂದು ತಹಸೀಲ್ದಾರ್ ಬಸಲಿಂಗಪ್ಪ ನಾಯಿಕೋಡಿ ಸ್ಪಷ್ಟಪಡಿಸಿ ಪ್ರಕ್ರಿಯೆ ನಿರ್ವಹಿಸಿದರು. ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ಭಟ್ ಇದ್ದರು.
ವಿಜಯೋತ್ಸವ: ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕ ಕ್ಲಬ್ ಮೈದಾನದಿಂದ ಅಂಬೇಡ್ಕರ್ ವೃತ್ತದವರೆಗೆ ಮರೆವಣಿಗೆ ನಡೆಸಿ ವಿಜಯೋತ್ಸವ ಆಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.