ವಿಜಯೋತ್ಸವದಲ್ಲಿ ವ್ಯಕ್ತಿ ಸಾವು
ದೇವದುರ್ಗ: ಸ್ಥಳೀಯ ಪುರಸಭೆ ನೂತನ ಅಧ್ಯಕ್ಷ ಫಕೀರಸಾಬ್ ಅವರ ಸಂಬಂಧಿಯೊಬ್ಬ ವಿಜಯೋತ್ಸವದ ಸಂದರ್ಭ ಬೈಕ್‌ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ. ಮೃತನನ್ನು ರಸೂಲ್ ಸಾಬ್(36) ಎಂದು ಗುರುತಿಸಲಾಗಿದೆ. ಪುರಸಭೆಯ ನೂತನ ಅಧ್ಯಕ್ಷರಾಗಿ ಫಕೀರಸಾಬ್ ಅವರು ಆಯ್ಕೆಯಾಗುತ್ತಿದ್ದಂತೆಯೇ ಬೈಕ್‌ನಲ್ಲಿ ಅರಕೇರಾಕ್ಕೆ ರ್ಯಾಲಿಯಲ್ಲಿ ತೆರಳಿದ್ದು, ಮರಳುವ ವೇಳೆ ಪಟ್ಟಣದ ಸಿರವಾರ ಕ್ರಾಸ್ ಬಳಿ ಮುಂದೆ ಸಾಗುತ್ತಿದ್ದ ಬೈಕ್‌ಗೆ ನೂತನ ಅಧ್ಯಕ್ಷರ ಅಕ್ಕನ ಮಗ ರಸೂಲ್ ಸಾಬ್ ಸಾಗುತ್ತಿದ್ದ ಬೈಕ್ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಹ; ದಂಪತಿ ಆತ್ಮಹತ್ಯೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಹಟ್ಟಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮಂಜುಳಾ (28) ಮತ್ತು ಆಕೆಯ ಪತಿ ಚಂದ್ರಕುಮಾರ್(32) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಕುಟುಂಬದ ವಿಷಯದಲ್ಲಿ ಕಲಹ ಮಾಡಿಕೊಂಡಿದ್ದು, ಅದರಿಂದ ಸಂಸಾರದಲ್ಲಿ ವೈಮನಸ್ಸುಂಟಾಗಿತ್ತು. ಅದರಿಂದ ಜೀವನದಲ್ಲಿ ಬೇಸರಗೊಂಡ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

