ಸಂಕೇತ್ ಕಿಡ್ಸ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಸಿಂಧನೂರು: ನಗರದ ಸಂಕೇತ್ ಹಲೋ ಕಿಡ್ಸ್ ಶಾಲೆಯಲ್ಲಿ ಡಾ. ಎಸ್.ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯಲ್ಲಿ ಶಿಕ್ಷಕರಿಗೆ ಒಂದೇ ಬಣ್ಣದ ಗುಂಡುಗಳನ್ನು ತೆಗೆಯುವುದು. ಬಲೂನ್ ಊದುವುದು. ರಿಂಗ್ ಹಾಕುವುದು. ಕಣ್ಣಾಮುಚ್ಚಾಲೆ ಆಟಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಂತರ ನಡೆದ ಕಾರ್ಯಕ್ರಮದಲ್ಲಿ ವಿಜೇತ ಶಿಕ್ಷಕರಿಗೆ ಬಹುಮಾನ ನೀಡಲಾಯಿತು. ಶಾಲೆಯ ಆಡಳಿತಾಧಿಕಾರಿ ಎಸ್.ಅನಿಲ್ರಾಜ್ ಮಾತನಾಡಿ, ಶಿಕ್ಷಕರ ಮೇಲೆ ಗುರುತರ ಜವಾಬ್ದಾರಿ ಇದೆ. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರೊಂದಿಗೆ ಮಾನವೀಯ ಮೌಲ್ಯಗಳನ್ನು, ಸಾಮಾಜಿಕ ಕಳಕಳಿಯನ್ನು ತುಂಬಬೇಕಿದೆ ಎಂದರು.
ಮುಖ್ಯಗುರು ಕವಿತಾ, ಶಿಕ್ಷಕಿಯರಾದ ಸೂರ್ಯ ಪ್ರಿಯಾಂಕ, ಲಕ್ಷ್ಮೀ, ಶಫೀಯಾ ಹಾಗೂ ಪಾಲಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

