ರಾಯಚೂರು

ಹೈಕೋರ್ಟ್ ತಡೆಯಾಜ್ಞೆ ನೀಡಿದೆ.., ನೀಡಿಲ್ಲ.., ಆದೇಶ ಬಂದಿಲ್ಲ...

Published On :

ರಾಯಚೂರು: ಸ್ಥಳೀಯ ನಗರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ..., ನೀಡಿಲ್ಲ...., ಆದೇಶ ಬಂದಿಲ್ಲ..
ಇಂಥ ಗೊಂದಲ ನಗರದಲ್ಲಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೂ ಮುನ್ನಾ ದಿನ ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ 1 ಗಂಟೆಯವರೆಗೂ ಮುಂದುವರಿದಿತ್ತು.
ರಾಜ್ಯ ಹೈಕೋರ್ಟ್ ಗುರುವಾರ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ರಾಜಕೀಯ ವಲಯದಲ್ಲಿ ಗೊಂದಲಕ್ಕೆ ಕಾರಣವಾಯಿತು.
ಆತಂಕ: ಈಗಾಗಲೇ ಕಳೆದೊಂದು ವಾರದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಅಧಿಕಾರ ಹಿಡಿಯಲು ಶತಾಯಗತಾಯ ಪ್ರಯತ್ನಿಸಿದ್ದವರಿಗಂತೂ ಕೋರ್ಟಿನ ಆದೇಶದ ವಿಚಾರ ಆತಂಕ ತಂದಿತ್ತು. ಈ ಕುರಿತು ಸಹಾಯಕ ಆಯುಕ್ತೆ ಹಾಗೂ ಚುನಾವಣಾ ಧಿಕಾರಿಯೂ ಆಗಿದ್ದ ಮಂಜುಶ್ರೀ ಅವರಿಗೆ ನಗರಸಭೆಯ ಸದಸ್ಯರು ದೂರವಾಣಿ ಮೂಲಕ ಸಂಪರ್ಕಿಸಿ ತಡೆಯಾಜ್ಞೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದು ನಿಟ್ಟುಸಿರಿಟ್ಟಿದ್ದಾರೆ.
ಇದಕ್ಕೂ ಮುನ್ನಾ ಮಾಧ್ಯಮಗಳಲ್ಲಿ ಬಿತ್ತರಗೊಂಡ ಕೋರ್ಟ್ ತಡೆಯಾಜ್ಞೆ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾಡಳಿತದ ಅಧಿಕಾರಿಗಳೂ ತಲೆಕೆಡಿಸಿಕೊಂಡಿದ್ದೂ ನಡೆಯಿತು. ತಡೆಯಾಜ್ಞೆ ನೀಡಿದೆಯೇ ಇಲ್ಲವೇ ಎಂಬ ಗೊಂದಲದ ಮಧ್ಯೆಯೇ ಏನಾದರೂ ಆಗಲಿ, ನಮಗೆ ಆದೇಶ ಬಂದಿಲ್ಲ. ಅದಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಿಯೇ ತೀರುತ್ತೇವೆಂದು ಅಧಿಕಾರಿಗಳು ನಿರ್ಧಾರ ಕೈಗೊಂಡರು. ಪರಿಣಾಮ ಶುಕ್ರವಾರ ದೇವದುರ್ಗ ಮತ್ತು ರಾಯಚೂರಿನ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸುಸೂತ್ರ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.