ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದ ಒತ್ತು
ಮಸ್ಕಿ: ವಿಶ್ವದೆಲ್ಲೆಡೆ ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ತಾಣಗಳಾಗಿ ಪರಿವರ್ತಿಸಲಾಗಿದೆ. ಆದರೆ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಇನ್ನೂ ಕಾಣಬೇಕಿದೆ ಎಂದು ಪ್ರವಾಸೋದ್ಯಮ ಹಾಗೂ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಅವರು ಪಟ್ಟಣದ ಭ್ರಮರಾಂಬಾ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಯಾತ್ರಿ ನಿವಾಸ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ, ಹಲವಾರು ದೇಶಗಳ ಅಭಿವೃದ್ಧಿ ಪ್ರವಾಸೋದ್ಯಮದಿಂದಲೇ ನಡೆಯುತ್ತಿದೆ. ರಾಜ್ಯದಲ್ಲಿ 330 ಪ್ರವಾಸಿ ತಾಣಗಳಿವೆ. ಇಂಥ ತಾಣಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ ಎಂದು ಹೇಳಿದರು.
ಅಭಿವೃದ್ಧಿ: ಪ್ರವಾಸೋದ್ಯಮದ ಬಗ್ಗೆ ಮೂರು ತಿಂಗಳ ಅವಧಿಯ ಕೋರ್ಸ್ಗಳನ್ನು ಪ್ರಾರಂಭಿಸಲು ರಾಜ್ಯದ ವಿಶ್ವವಿದ್ಯಾನಿಯಲಗಳಿಗೆ ಪ್ರಸ್ತಾವನೆ ಕಳಿಸಲಾಗಿದೆ.
ಮಸ್ಕಿಯ ಅಶೋಕ ಶಿಲಾನ್ಯಾಸ ಸ್ಥಳವನ್ನು ಅಭಿವೃದ್ಧಿಗೊಳಿಸಿ ಪ್ರವಾಸಿ ತಾಣವನ್ನಾಗಿ ಮಾಡಲು ಇದ್ದ ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗಿದೆ. ಅನುದಾನವನ್ನೂ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಪ್ರಾರಂಭವಾಗುವ ಭರವಸೆ ನೀಡಿದರು.
ಜನಪರ ಸರ್ಕಾರ: ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರವಾಗಿದ್ದು, ಜನ ಪರ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸುವುದಿಲ್ಲವೆಂದರು. ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿದರು. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಎಂಲ್ಸಿ ಮನೋಹರ ಮಸ್ಕಿ, ಜಿಪಂ ಸದಸ್ಯ ಎಚ್.ಬಿ. ಮುರಾರಿ, ಗ್ರಾ.ಪಂ.ಅಧ್ಯಕ್ಷ ಎಂ.ಅಮರೇಶ, ತಾ.ಪಂ.ಸದಸ್ಯರಾದ ಹನುಮಂತಪ್ಪ ಮೋಚಿ, ನೀಲಮ್ಮ ಮರಳದ್, ಸಹಾಯಕ ಆಯುಕ್ತ ಟಿ.ಯೋಗೀಶ್, ಜಿಪಂ ಸಿಇಒ ಡಾ.ಮುದ್ದುಮೋಹನ್, ಗುಲ್ಬರ್ಗಾದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಎಂ. ರಮೇಶ ಸೇರಿ ಅನೇಕರಿದ್ದರು.
ಮುತ್ತಿಗೆ: ಲಿಂಗಸ್ಗೂರಿನಿಂದ ಪಟ್ಟಣದ ಅಶೋಕ ವೃತ್ತದ ಬಳಿ ಧಾವಿಸಿದ ಸಚಿವ ಆರ್.ವಿ. ದೇಶಪಾಂಡೆ ಅವರಿಗೆ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಮಸ್ಕಿಯ ಶಿಲಾನ್ಯಾಸದ ಸ್ಥಳವನ್ನು ಅಭಿವೃದ್ಧಿಪಡಿಸುವಂತೆ ಕಾರ್ಯಕರ್ತರು ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

