ಬೆಳ್ಳಿ ರಥ ಸಮರ್ಪಣೆ, ಶ್ರೀಗಳಿಗೆ ತುಲಾಭಾರ
ರಾಯಚೂರು: ತಾಲೂಕಿನ ಮಟಮಾರಿ ಗ್ರಾಮದಲ್ಲಿ ಬಿಚ್ಚಾಲಿ ಮಟಮಾರಿ ಸಾವಿರ ದೇವರ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆದ ಪುರಾಣ ಮಹಾಮಂಗಳ ಮಹೋತ್ಸವ ಇತ್ತೀಚೆಗೆ ನಡೆಯಿತು.
ಗ್ರಾಮದಲ್ಲಿ ಶ್ರೀಮಠದಿಂದ ನಿರ್ಮಿಸಿದ 10 ಲಕ್ಷ ವೆಚ್ಚದ ಬೆಳ್ಳಿ ರಥದ ಸಮರ್ಪಣೆ ಜತೆಗೆ ಶ್ರೀಮಠದ ಶ್ರೀವೀರಭದ್ರ ಶಿವಾಚಾರ್ಯರು ಹಾಗೂ ರಾಯಚೂರಿನ ಸೋಮವಾರಪೇಟೆಯ ಶ್ರೀಅಭಿನವ ರಾಚೋಟಿ ವೀರಶಿವಾಚಾರ್ಯರ ರಥಯಾತ್ರೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಿತು. ರಥಯಾತ್ರೆಯಲ್ಲಿ ಕುಂಭಕಳಸ, ವಾದ್ಯಮೇಳಗಳೊಂದಿಗೆ ನೂರಾರು ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.
ನಂತರ ಶಿವಲಿಂಗಯ್ಯ ಶಾಸ್ತ್ರಿಗಳು ಪುರಾಣ ಮಂಗಳ ಮಹೋತ್ಸವ ನೆರವೇರಿಸಿದರು. ಶ್ರೀಮಠದ ಶಿಷ್ಯರು ಶ್ರೀವೀರಭದ್ರ ಶಿವಾಚಾರ್ಯರಿಗೆ ತುಲಾಭಾರ ನೆರವೇರಿಸಿದರು. ಉಭಯ ಶ್ರೀಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಗಣ್ಯರು, ರಾಜಕೀಯ ನಾಯಕರು, ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

