ಸಂಕ್ಷಿಪ್ತ ಸುದ್ದಿ
ಶೈಕ್ಷಣಿಕ, ಜಾನಪದ ಜಾಗೃತಿ ಸಮಾವೇಶ
ರಾಯಚೂರು: ಮಾನವಿಯ ರಾಷ್ಟ್ರಕವಿ ಕುವೆಂಪು ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ. 14ರಂದು ಶೈಕ್ಷಣಿಕ ಹಾಗೂ ಜಾನಪದ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಮುಖ್ಯಸ್ಥ ರಾಮಚಂದ್ರಪ್ಪ ತಿಳಿಸಿದ್ದಾರೆ. ಅಂದು ನಗರದ ರಂಗಮಂದಿರದಲ್ಲಿ ಬೆಳಗ್ಗೆ 10ಕ್ಕೆ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ತಿಮ್ಮಣ್ಣ ವಹಿಸುವರು. ವಿಶೇಷ ಆಹ್ವಾನಿತರಾಗಿ ಹಂಪಿ ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಚಲುವರಾಜು ಹಾಗೂ ಶೇಷಗಿರಿರಾವ್ ಕುಲಕರ್ಣಿ ಅವರು ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಈ ವೇಳೆ ಜಿಲ್ಲೆಯ ನೂತನ ಶಾಸಕರು, ಪರಿಸರ ಪ್ರೇಮಿ ಶಿಕ್ಷಕರು, ಜಾನಪದ ಕಲಾವಿದರನ್ನು ಸಂಸ್ಥೆಯಿಂದ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಈ ವೇಳೆ ಅಪ್ಪಗೆರೆ ತಿಮ್ಮರಾಜು ಅವರಿಂದ ಜಾನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಿದ್ದಾರೆ.
16ಕ್ಕೆ ಧರಣಿ: ಮಾದಿಗ
ದಂಡೋರಾ ನಿರ್ಧಾರ
ರಾಯಚೂರು: ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆ. 16ರಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಮಾನವಿಯ ಶಾಸಕರ ಭವನದ ಉದ್ಯಾನವನದಲ್ಲಿ ಇತ್ತೀಚೆಗೆ ನಡೆದ ಮಾದಿಗ ದಂಡೋರಾದ ಜಿಲ್ಲಾ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸದಾಶಿವ ಆಯೋಗದ ವರದಿ ಶಿಫಾರಸು ಜಾರಿಗೆ ಸಿಎಂ ಕೇಂದ್ರಕ್ಕೆ ವರದಿ ಕಳಿಸುವ ನಿಟ್ಟಿನಲ್ಲಿ ಒತ್ತಡ ಹೇರಲು ಸಭೆಯಲ್ಲಿ ಚರ್ಚಿಸಲಾಯಿತು. ಅದೇ ರೀತಿ ಜಿಲ್ಲೆಯ ವಿವಿಧೆಡೆ ಮಾದಿಗರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಅಸ್ಪಷ್ಯತೆಯಂಥ ಪ್ರಕರಣಗಳ ಬಗ್ಗೆ ಸಂಘಟನೆಯ ಪ್ರಮುಖರು ಚರ್ಚಿಸಿದರು. ಈ ವೇಳೆ ಜಿಲ್ಲಾ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾಗಿ ರಾಘವೇಂದ್ರ ಬೋರೆಡ್ಡಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಆರೋಗ್ಯಪ್ಪ ಪನ್ನೂರು, ಉಪಾಧ್ಯಕ್ಷ ಮಾನಪ್ಪ ಮೇಸ್ತ್ರಿ, ಶಿವರಾಜ್ ಹೊಸಪೇಟೆ, ಭೀಮರಾಯ ಬುಡದಿನ್ನಿ, ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತ ಸುಲ್ತಾನಪೂರ್, ಲಿಂಗಪ್ಪ ಮರಾಠ, ಮರಿಯಪ್ಪ ಕಡಿಮನಿ, ಕಾರ್ಯದರ್ಶಿಯಾಗಿ ಆನಂದ ಏಗನೂರು, ಆಂಜಿನೇಯ್ಯ ಸ್ವಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಅಳರಪ್ಪ ಮುಷ್ಟೂರು, ಆಂಜಿನೇಯ್ಯ ಕುರುಬದೊಡ್ಡಿ ಸೇರಿ ಅನೇಕರು ಪದಾಧಿಕಾರಿಗಳಾಗಿ ನೇಮಕಗೊಂಡರು. ಸಂಘಟನೆ ಗುಲ್ಬರ್ಗ ವಿಭಾಗೀಯ ಅಧ್ಯಕ್ಷ ಕೆ.ಎಸ್. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ್ ಭಂಡಾರಿ, ಮರಿಯಪ್ಪ ಕಡಿಮನಿ, ಸುಂಕೇಶ್ವರಾಳ ಮರಿಯಪ್ಪ, ಲಿಂಗಪ್ಪ ಮರಾಠ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

