ರಾಯಚೂರು

ಸಾಕ್ಷರತಾ ಸಪ್ತಾಹ ಯಶಸ್ಸಿಗೆ ಅಗತ್ಯ ಕ್ರಮ: ಡಿಸಿ

Published On :

ಕ.ಪ್ರ. ವಾರ್ತೆ  ರಾಯಚೂರು  ಸೆ.10
ಅಂತಾರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಸಮಾರಂಭವನ್ನು ಸೆ.17ರಂದು ಆಯೋಜಿಸಲು ನಿರ್ಧರಿಸಿದ್ದು,   ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಆದೇಶಿಸಿದರು.
ನಗರದಲ್ಲಿ ಮಂಗಳವಾರ ಜಲನಿರ್ಮಲ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿ, ಸಾಕ್ಷರತಾ ಸಪ್ತಾಹವನ್ನು ಸೆ. 17ರಂದು ಆಯೋಜಿಸಿದ್ದು, ಅದೇ ದಿನ ಹೈ.ಕ ವಿಮೋಚನೆ ದಿನಾಚರಣೆ ಸಮಾರಂಭವನ್ನೂ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಮೋಚನಾ ದಿನಾಚರಣೆ ಸಮಾರಂಭ ಬೆಳಗ್ಗೆ ಮತ್ತು ಮಧ್ಯಾಹ್ನ 3ಕ್ಕೆ ನಗರದ ರಂಗಮಂದಿರದಲ್ಲಿ ಸಾಕ್ಷರತಾ ಸಪ್ತಾಹ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಉಸ್ತುವಾರಿ ಸಚಿವ ಕಾರ್ಯಕ್ರಮ ಉದ್ಘಾಟನೆ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  
ಜಿಪಂ ಸಿಇಒಗೆ ಉಸ್ತುವಾರಿ ಹೊಣೆ: ನಗರದ ಪ್ರಮುಖ ರಸ್ತೆಗಳಲ್ಲಿ ಕಲಾ ತಂಡಗಳ ಮುಖಾಂತರ ರಂಗಮಂದಿರವರೆಗೆ ಮೆರವಣಿಗೆ ಜರುಗಲಿದ್ದು, ನಂತರ ನಡೆಯುವ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಅಧ್ಯಕ್ಷ ಮಹಾಂತೇಶ ಮಸ್ಕಿ ಅವರು ಸಾಕ್ಷರತೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮದ ಉಸ್ತುವಾರಿಯನ್ನು ಜಿಪಂ ಸಿಇಒ ಡಾ. ಮುದ್ದುಮೋಹನ್‌ರಿಗೆ ಸೂಚಿಸಿದರು.
ಜಾಗೃತಿ ಮೂಡಿಸುವ ಕಾರ್ಯಕ್ರಮ: ಸಭೆಯಲ್ಲಿ ಹಾಜರಿದ್ದ ಉಪಸಮಿತಿಯ ಅಧಿಕಾರಿಗಳಿಗೆ ಸಾಕ್ಷರತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಇದಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಮತ್ತು ಜಿಪಂ ಸಿಇಒ ಡಾ. ಮುದ್ದುಮೋಹನ್ ಆದೇಶಿಸಿದರು.
ಡಿಡಿಪಿಐ ಪರಮೇಶ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್.ಇಂದಿರಾ  ಮತ್ತಿತರ ಅಧಿಕಾರಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.