ರಾಯಚೂರು

ನಾಳೆ ಕಾಲೇಜು ನೂತನ ಕಟ್ಟಡ ಉದ್ಘಾಟನೆ

Published On :

ಗುಲ್ಬರ್ಗ: ಆಳಂದ ತಾಲೂಕಿನ ಮಾದನ ಹಿಪ್ಪರಾಗದಲ್ಲಿರುವ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಸೆ.13ರಂದು ಉದ್ಘಾಟನೆಗೊಳ್ಳಲಿದೆ. ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಅಂದು ಸಂಜೆ 4 ಗಂಟೆಗೆ ಉದ್ಘಾಟಿಸುವರು.
 ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ಬೀದರ್ ಸಂಸದ ಡಾ. ಎನ್.ಧರ್ಮಸಿಂಗ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಆಳಂದ ಶಾಸಕ ಬಿ.ಆರ್. ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.
 ಎಂಎಲ್ಸಿಗಳಾದ ಅಮರನಾಥ ಪಾಟೀಲ್, ಅಲ್ಲಂಪ್ರಭು ಪಾಟೀಲ್, ಜಿಪಂ ಮಾದನಹಿಪ್ಪರಗಾ ಸದಸ್ಯೆ ಪೂಜಾ ರಮೇಶ ಲೋಹಾರ, ತಾಪಂ ಸದಸ್ಯೆ ಸಿದ್ದಮ್ಮ ಸಂಜುಕುಮಾರ್ ಪಾಟೀಲ್ ಹಾಗೂ ಗ್ರಾಪಂ ಅಧ್ಯಕ್ಷ ಬಸವರಾಜ ಯಳಮೇಲಿ ಅತಿಥಿಗಳಾಗಿ ಆಗಮಿಸುವರು. ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಮೈಂದರಗಿ ಮಹಾಂತೇಶ್ವರ ವಿರಕ್ತಮಠದ ಮಹಾಂತ ಸ್ವಾಮೀಜಿ ಹಾಗೂ ಮಾದನ ಹಿಪ್ಪರಗಾ ಶಿವಲಿಂಗೇಶ್ವರ ವಿರಕ್ತಮಠದ ಮಹಾಂತ ದೇವರು ಉತ್ತರಾಧಿಕಾರಿಗಳು ಸಾನ್ನಿಧ್ಯ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.