ಮೂಲಸೌಲಭ್ಯ ಒದಗಿಸಲು ಒತ್ತಾಯ: ಪ್ರತಿಭಟನೆ
ರಾಯಚೂರು: ನಗರದ ಅಂಬೇಡ್ಕರ್ ವಸತಿ ನಿಲಯಕ್ಕೆ ಮೂಲಸೌಲಭ್ಯ ಒದಗಿಸಲು ಆಗ್ರಹಿಸಿ ಗುರುವಾರ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಪಂ ಸಿಇಒಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿದ್ದು, ಅವರಿಗೆ ಶೌಚಾಲಯ, ಸಮರ್ಪಕ ಹಾಗೂ ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಸೌಲಭ್ಯ ಒದಗಿಸಿಲ್ಲ. ಪಠ್ಯಪುಸ್ತಕಗಳ ವಿತರಣೆಯಾಗಿಲ್ಲ ಎಂದು ಆರೋಪಿಸಿದರು.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೌಲಭ್ಯ, ಗಣಕಯಂತ್ರ ಒದಗಿಸಲು, ಇಂಗ್ಲಿಷ್ ಕಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕ್ರೀಡಾ ಸಾಮಗ್ರಿ ಒದಗಿಸುವುದು, ಅಡುಗೆ ಸಿಬ್ಬಂದಿಯನ್ನು ವರ್ಗಾಯಿಸಬೇಕು.
ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದವರಿಗೆ ಉಚಿತವಾಗಿ ಬ್ಯಾಂಕ್ ಖಾತೆ ತೆರೆಯಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಶೈಕ್ಷಣಿಕ ಪ್ರವಾಸ ಕರೆದೊಯ್ಯಬೇಕು. ಸೊಳ್ಳೆ ಪರದೆ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ವಿದ್ಯಾರ್ಥಿಗಳು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಮಲ್ಲೇಶ್, ನಾಗೇಶ್, ದುರುಗಪ್ಪ, ರಾಜಶೇಖರ್, ಆಂಜಿನೇಯ, ನಾಗರಾಜ, ಸುರೇಶ್ ಸೇರಿ ಅನೇಕರು ಪ್ರತಿಭಟನೆಯಲ್ಲಿದ್ದರು.
ಇಂದು ನಗರಕ್ಕೆ ಉಸ್ತವಾರಿ ಸಚಿವ
ಸಿಂಧನೂರು: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ವೈದ್ಯಕೀಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸೆ.13ರಂದು ಸಿಂಧನೂರಿಗೆ ಆಗಮಿಸಲಿದ್ದಾರೆ.
ತಾಲೂಕಾ ಕ್ರೀಡಾಂಗಣ ಮತ್ತು ತಾಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ ಉದ್ಘಾಟನೆ, ನಗರದ ಪಿಡಬ್ಲ್ಯೂಡಿ ಕ್ಯಾಂಪ್ನ ಆರ್ಎಂಎಸ್ ಶಾಲಾ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ರಾಗಲಪರ್ವಿ ಹಾಗೂ ಗಾಂಧಿನಗರ ಗ್ರಾಮಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸುವರು. ಗಾಂಧಿನಗರದಲ್ಲಿ ಸಾರ್ವಜನಿಕ ಬಹಿರಂಗ ಸಭೆ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಶಾಸಕ ಹಂಪನಗೌಡ ಬಾದರ್ಲಿ ವಹಿಸುವರು. ಧ್ವಜಾರೋಹಣವನ್ನು ಕೊಪ್ಪಳ ಸಂಸದ ಎಸ್. ಶಿವರಾಮೇಗೌಡ ನೆರವೇರಿಸುವರು. ಕ್ರೀಡಾ ಜ್ಯೋತಿಯನ್ನು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಸ್ವೀಕರಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಲಲಿತಮ್ಮ ಲಿಂಗರಾಜ, ಎಂಎಲ್ಸಿಗಳಾದ ಅಮರನಾಥ ಪಾಟೀಲ್, ಹಾಲಪ್ಪಾಚಾರ್ಯ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್.ಶಂಕ್ರಪ್ಪ, ಮಾಜಿ ಶಾಸಕ ಆರ್.ನಾರಾಯಣಪ್ಪ, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ, ಜಿ.ಪ.ನ ಸಿ.ಇ.ಒ.ಡಾ.ಮುದ್ದುಮೋಹನ, ಸಹಾಯಕ ಆಯುಕ್ತ ಟಿ.ಯೋಗೀಶ ಮತ್ತಿತರರು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

