ಪ್ರಶಸ್ತಿಗೆ ಅರ್ಜಿ ಕರೆ
ರಾಯಚೂರು: 2013ನೇ ಸಾಲಿನಲ್ಲಿ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ/ ಸಲ್ಲಿಸಿರುವ ವಿಶೇಷ ಶಾಲೆಗಳ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಜಿಲ್ಲಾ ಕಚೇರಿ, ಬಾಪೂಜಿ ಪ್ರೌಢಶಾಲೆ ಹತ್ತಿರ, ಸಿಯಾತಲಾಬ್ ರಾಯಚೂರು ಇಲ್ಲಿ ಪಡೆಯಬಹುದಾಗಿದೆ ಅಥವಾ www. welfareofdisabled.nic.in ವೆಬ್ಸೈಟ್ನಿಂದ ಅರ್ಜಿ ಪಡೆದು ಭರ್ತಿ ಮಾಡಿ ಅ.15ರೊಳಗೆ ಸಲ್ಲಿಸಲು ಕೋರಲಾಗಿದೆ.
20ರಂದು ಕೆಡಿಪಿ ಸಭೆ
ರಾಯಚೂರು: ಇಲ್ಲಿನ ಜಿಲ್ಲಾ ಪಂಚಾಯಿತಿಯ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆಯು ಸೆ.20ರಂದು ನಡೆಯಲಿದೆ. ಅಂದು ಬೆಳಗ್ಗೆ ನಗರದ ಜಿಪಂ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕೆಡಿಪಿ ಸಭೆಯು ನಡೆಯಲಿದೆ ಎಂದು ಜಿಪಂ ಯೋಜನಾಧಿಕಾರಿಗಳ ಕಚೇರಿ ತಿಳಿಸಿದೆ.
ಜೇಷ್ಠತಾ ಪಟ್ಟಿ ಪ್ರಕಟ
ರಾಯಚೂರು: ಜಿಲ್ಲೆಯ ಪ್ರಾಥಮಿಕ ಶಾಲೆಗಳ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಕರ ಮಾಹಿತಿಗಾಗಿ ಪಟ್ಟಿ ಪ್ರಕಟಿಸಿದ್ದು, ಪಟ್ಟಿಯಲ್ಲಿ ಅರ್ಹ ಶಿಕ್ಷಕರ ಹೆಸರು ಬಿಟ್ಟು ಹೋಗಿದ್ದಲ್ಲಿ ಅಂತಹ ಶಿಕ್ಷಕರ ವಿವರ ಹಾಗೂ ಶಿಕ್ಷಕರ ಮಾಹಿತಿ ಸರಿ ಇದ್ದ ಬಗ್ಗೆ ಪರಿಶೀಲಿಸಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರಕ ದಾಖಲೆಗಳೊಂದಿಗೆ ಸೆ. 15ರೊಳಗೆ ಡಿಡಿಪಿಐ ಅವರಿಗೆ ಸಲ್ಲಿಸಲು ಸೂಚಿಸಲಾಗಿದೆ.
ವಿದ್ಯಾರ್ಥಿ ವೇತನ
ರಾಯಚೂರು: ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದುವುದು ಕಡ್ಡಾಯ ಎಂದು ದೇವದುರ್ಗ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕೋಟ್ರೆ ತಿಳಿಸಿದ್ದಾರೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.30 ಕಡೆಯ ದಿನವಾಗಿದೆ. ಅರ್ಜಿಯನ್ನು ವೆಬ್ಸೈಟ್ www.sw.kar.nic.inನಲ್ಲಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

