ಮೂಲಸೌಲಭ್ಯ ಒದಗಿಸಲು ಆದ್ಯತೆ: ಭರವಸೆ
ದೇವದುರ್ಗ: ಪಟ್ಟಣದ ಜನತೆ ಮೂಲಭೂತ ಸೌಲಭ್ಯ ಒದಗಿಸುವುದೂ ಸೇರಿ ಪಟ್ಟಣವನ್ನು ಮಾದರಿ ಪಟ್ಟಣಯಾಗಿಸಲು ಸರ್ವ ಪ್ರಯತ್ನ ಮಾಡುವುದಾಗಿ ಪುರಸಭೆಯ ನೂತನ ಅಧ್ಯಕ್ಷ ಫಕ್ರುದ್ದೀನ್ ಗೌರಂಪೇಟ ಭರವಸೆ ನೀಡಿದರು.
ಅವರು ಗುರುವಾರ ಪುರಸಭೆ ಕಾರ್ಯಾಲಯದಲ್ಲಿ ಪದಗ್ರಹಣ ನಂತರ ಮಾತನಾಡಿ, ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ ಅವಧಿಯಲ್ಲಿ ಪಟ್ಟಣಕ್ಕೆ 24/7 ಕುಡಿಯುವ ನೀರಿನ ರು. 38 ಕೋಟಿ ಯೋಜನೆ ಮಂಜೂರು ಮಾಡಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಪಟ್ಟಣದಲ್ಲಿ ಸಿಸಿ ರಸ್ತೆ, ಚರಂಡಿಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಅಭಿವೃದ್ಧಿ ಕಾರ್ಯಕ್ಕೆ ಅನುದಾನದ ಕೊರತೆಯಿಲ್ಲ ಎಂದರು.
ಪಟ್ಟಣವನ್ನು ಜಿಲ್ಲೆಯಲ್ಲಿಯೇ ಮಾದರಿ ಪಟ್ಟಣವಾಗಿಸುವ ಆಸೆ ತಮ್ಮದಾಗಿದ್ದು, ಸರ್ವ ಸದಸ್ಯರು ಮತ್ತು ಸಿಬ್ಬಂದಿಯಿಂದ ಸಹಕಾರ ಅಗತ್ಯ ಎಂದ ಅವರು, ಪಟ್ಟಣದ ಅಭಿವೃದ್ಧಿ ವಿಷಯದಲ್ಲಿ ಪಕ್ಷಾತೀತವಾಗಿ ಸರ್ವರ ಸಲಹೆ ಸೂಚನೆ, ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಪುರಸಭೆಯಲ್ಲಿ ಬಿಜೆಪಿ ಆಡಳಿತವಿದ್ದರೂ, ಕಾಂಗ್ರೆಸ್ ಸದಸ್ಯರ ಬೆಂಬಲ ನೀಡಲಿದ್ದಾರೆಂದು ಪುರಸಭೆಯ ಕಾಂಗ್ರೆಸ್ ಸದಸ್ಯ ವೆಂಕಟೇಶ ಮಕ್ತಲ್ ಹೇಳಿದರು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ಭಟ್, ಪುರಸಭೆ ಸದಸ್ಯರಾದ ಚಂದ್ರಶೇಖರ ಚಲುವಾದಿ, ಶೆಟ್ಟಿ ಶಿವನಗೌಡ, ಹನುಮೇಶ ನಾಯಕ, ಮಹ್ಮದ ಯೂನೂಸ್ ಶಹಾಪೂರಿ, ಅಲಿಂ ಪಾಶಾ, ಬಿಜೆಪಿ ಅಧ್ಯಕ್ಷ ಬಸವರಾಜ ಗಾಣಧಾಳ, ಬುವಾಜಿ ಗೌರಂಪೇಟ, ಬಸವರಾಜ ಅಕ್ಕರಕಿ, ಬಸನಗೌಡ ವೆಂಕಟಾಪೂರ, ಶೇಖ ಮುನ್ನಾಬಾಯಿ, ಸುರೇಶ ಗೌರಂಪೇಟ ಸೇರಿ ಅನೇಕರಿದ್ದರು.
ಇಂದು ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್
ರಾಯಚೂರು: ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸೆ.13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಅವರು ರಾಯಚೂರು ನಗರಕ್ಕೆ ಆಗಮಿಸಿ ಬೆಳಗ್ಗೆ 10ಕ್ಕೆ ಸಿಂಧನೂರಿನಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ನಂತರ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಅವರು ಗುಲ್ಬರ್ಗಕ್ಕೆ ಪ್ರಯಾಣಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

