ರಾಯಚೂರು

ಇಂದು ಎಲ್‌ಬಿಕೆ ವಿದ್ಯಾಲಯದಲ್ಲಿ ದತ್ತಿ ಉಪನ್ಯಾಸ

Published On :

ಸಿಂಧನೂರು: ನಗರದ ಎಲ್‌ಬಿಕೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಸೆ.14 ಶನಿವಾರ ಮಧ್ಯಾಹ್ನ 12ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ತಿಳಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಎಸ್. ಶರಣೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಕ್ತಾ ಪತ್ತಿನ ಸೌಹಾರ್ದ ಸಹಕಾರಿಯ ಅಧ್ಯಕ್ಷ ಪಿ. ವೀರಭದ್ರಪ್ಪ ಕುರಕುಂದಿ ವಹಿಸಲಿದ್ದಾರೆ. ನೆಟೆಕಲ್ ಚಂದ್ರಪ್ಪಗೌಡ ಗೋರೆಬಾಳ ಸ್ಮಾರಕ ದತ್ತಿ ಉಪನ್ಯಾಸವನ್ನು ಸಮಾಜ ಹಾಗೂ ರಂಗಭೂಮಿ ವಿಷಯ ಕುರಿತು ನೂತನ ವಿದ್ಯಾ ಸಂಸ್ಥೆ  ಉಪಾಧ್ಯಕ್ಷ ವೆಂಕಣ್ಣಾಚಾರ್ ಜೋಶಿ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ, ಗೌರವ ಕಾರ್ಯದರ್ಶಿ ಎಸ್. ದೇವೇಂದ್ರಗೌಡ, ಎನ್. ಷಣ್ಮುಖಗೌಡ ಗೊರೆಬಾಳ, ದತ್ತಿ ದಾನಿಗಳಾದ ಗಿರಿಜಾ ಮಹಿಳಾ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಜಿ.ಬಿ. ಹೇಮವಾಡಗಿ, ಎಲ್‌ಬಿಕೆ ಕಾಲೇಜಿನ ಆಡಳಿತಾಧಿಕಾರಿ ಪಂಪಣ್ಣ ಹಳ್ಳಿ, ಉಪನ್ಯಾಸಕ ಹಿರಿಯ ಸಾಹಿತಿ ಹೆಚ್.ಜಿ. ಹಂಪಣ್ಣ, ಪ್ರಾಚಾರ್ಯ ಪರಶುರಾಮ ಮಲ್ಲಾಪೂರ, ತಾಲೂಕ ಕಸಾಪ ಅಧ್ಯಕ್ಷೆ ರಮಾದೇವಿ ಶಂಭೋಜಿ ಉಪಸ್ಥಿತರಿರುವರು.
ಸನ್ಮಾನ: ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ,  ಗೌತಮ್ಮೆಹ್ತಾ, ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ಪಡೆದಿರುವ ಪತ್ರಕರ್ತ ಅಮರೇಶ ಅಲಬನೂರು, ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಶ್ರೀಶೈಲ್ ಕೌದಿ ಅವರನ್ನು ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಾಲೂಕ ಕಸಾಪ ಗೌರವ ಕಾರ್ಯದರ್ಶಿಗಳಾದ ಹಾಗೂ ವೀರೇಶ ಗೋನವಾರ ಮತ್ತು ಗೌರವ ಕೋಶಾಧ್ಯಕ್ಷ ಆರ್.ಸಿ. ಪಾಟೀಲ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.