ರಾಯಚೂರು

ಆಂಗ್ಲ ಮಾಧ್ಯಮ ಶಾಲೆಗೆ ಸಚಿವರಿಂದ ಶಂಕುಸ್ಥಾಪನೆ

Published On :

ಸಿಂಧನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು.
ಪಿಡ್ಲ್ಯೂಡಿ ಕ್ಯಾಂಪಿನಲ್ಲಿ ಶುಕ್ರವಾರ ಆದರ್ಶ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ನೆರವಿನೊಂದಿಗೆ ಮಕ್ಕಳಿಗೆ ಅನೇಕ ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯ ಸರ್ಕಾರವು ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಇದರ ಉಪಯೋಗವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಕರು ದೇಶದ ಶಕ್ತಿ ಇದ್ದಂತೆ. ಅಂತಹ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ಉಜ್ವಲಗೊಳಿಸಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ರಾಜ್ಯ ಸರ್ಕಾರ ಮೂರೇ ತಿಂಗಳಲ್ಲಿ ಹಲವು ಅಭಿವೃದ್ದಿ ಕಾರ್ಯಗಳು ಮಾಡಿದೆ. ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದರು. ನಗರಸಭೆ ಅಧ್ಯಕ್ಷ ಸೈಯದ್ ಜಾಫರ್‌ಅಲಿ ಜಾಗೀರದಾರ, ಲಿಂಗಸ್ಗೂರು ಸಹಾಯಕ ಆಯುಕ್ತ ಟಿ. ಯೋಗೇಶ, ಎಪಿಎಮ್‌ಸಿ ಅಧ್ಯಕ್ಷ ಸಣ್ಣ ಕರಿಯಪ್ಪ, ಉಪಾಧ್ಯಕ್ಷ ರಾಮಣ್ಣ ಹುಡಾ, ಜಿಪಂ ಸದಸ್ಯ ಶಿವನಗೌಡ ಎಲೆಕೂಡ್ಲಿಗಿ, ಕ್ಷೇತ್ರ ಶಿಕ್ಷಣಾಧಿಕಾರಿ ವೃಷಭೇಂದ್ರಯ್ಯ ಸ್ವಾಮಿ, ಮುಖಂಡರಾದ ಎನ್. ಶಿವನಾಗಪ್ಪ, ಕಾಳಿಂಗಪ್ಪ ವಕೀಲರು, ಲಿಂಗರಾಜ ಗೊರೇಬಾಳ, ಮಲ್ಲನಗೌಡ ಕನ್ನಾರಿ, ಅಶೋಕ ಭೂಪಾಲ, ಬಸನಗೌಡ ಬಾದರ್ಲಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.