ರಾಯಚೂರು

ಮುದಗಲ್ ಪಪಂ: ಸಿಬ್ಬಂದಿ ಚಕ್ಕರ್‌ಗೆ ಬ್ರೇಕ್

Published On :

ಮುದಗಲ್: ಸ್ಥಳೀಯ ಪಟ್ಟಣ ಪಂಚಾಯತಿಯಲ್ಲಿ 13ನೇ ಹಣಕಾಸು ಯೋಜನೆಯಡಿಯಲ್ಲಿ ವಿವಿಧೆಡೆ ಸಿಸಿ ಕ್ಯಾಮರಾ ಅಳವಡಿಸುವ ಮೂಲಕ ಕಚೇರಿ ಕೆಲಸಕ್ಕೆ ಚುರುಕು ನೀಡಲು ಮುಂದಾಗಿದ್ದೇವೆ ಎಂದು ಮುಖ್ಯಾಧಿಕಾರಿ ಎಂ. ವಿಜಯಲಕ್ಷ್ಮೀ ತಿಳಿಸಿದರು.
ಪಪಂ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಯಂದು ಪತ್ರಕರ್ತರಿಗೆ ಮಾಹಿತಿ ನೀಡಿದ ಅವರು ಪಟ್ಟಣ ಪಂಚಾಯತಿಯಲ್ಲಿ ಸಿಬ್ಬಂದಿ ಸಮರ್ಪಕವಾಗಿ ನಿಗದಿತ ಸಮಯಾನುಸಾರವಾಗಿ ಕಾರ್ಯ ನಿರ್ವಹಿಸುವಂತೆ ಕಟ್ಟು ನಿಟ್ಟಿನ ನಿಗಾ ವಹಿಸಲಾಗಿದೆ. ಪಪಂ ಯಲ್ಲಿ ಯಾವುದೇ ರೀತಿ ಅಹಿತಕರ ಘಟನೆಗಳು, ಸಿಬ್ಬಂದಿ ಕರ್ತವ್ಯ ಲೋಪ ಜರುಗಬಾರದೆನ್ನುವ ನಿಟ್ಟಿನಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈಗ ಐದು ಸಿಸಿ ಕ್ಯಾಮರಾಗಳನ್ನು ರು. 3 ಲಕ್ಷ ಮೊತ್ತದಲ್ಲಿ ಅಳವಡಿಸಲಾಗಿದ್ದು, ಅಧ್ಯಕ್ಷರ ಕೊಠಡಿ, ಮುಖ್ಯಾಧಿಕಾರಿಗಳ ಕೊಠಡಿ, ಸಿಬ್ಬಂದಿ ವರ್ಗದ ಎರಡು ಕೊಠಡಿ, ದ್ವಾರ ಬಾಗಿಲಿನ ಹಾಲ್‌ನಲ್ಲಿ ಅಳವಡಿಸಲಾಗಿದೆ. ಇನ್ನೂ ಎರಡು ಮೂರು ಕ್ಯಾಮರಾಗ
ಳನ್ನು ಅಳವಡಿಸಲಾಗುವುದು. ಅಲ್ಲದೇ ಅವಶ್ಯವಿದ್ದ ಸಿಬ್ಬಂದಿಗೆ ವಾಕಿಟಾಕಿ ಕೂಡ ಕೆಲವೇ ದಿನಗಳಲ್ಲಿ ವಿತರಿಸಿ, ಸಾರ್ವಜನಿಕರಿಗೆ ಯಾವದೇ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗುವುದು. ಪಟ್ಟಣದಲ್ಲಿಯ ಮೂಲಭೂತ ಸೌಲಭ್ಯಗಳನ್ನು ಸಂಪೂರ್ಣವಾಗಿ ಒದಗಿಸಲು ಕಾರ್ಯಾಲಯದ ಸಿಬ್ಬಂದಿಯ ಕರ್ತವ್ಯದ ಮೇಲೆ ನಿಗಾವಹಿಸಲು ಈ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.