ರಾಯಚೂರು

ಶಾಸಕರಿಂದ ದ್ವೇಷದ ರಾಜಕಾರಣ; ಖಂಡನೆ

Published On :

ಸಿಂಧನೂರು: ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಪ್ರೌಢಶಾಲಾ ಕ್ರೀಡಾಕೂಟದ ಆಹ್ವಾನ ಪತ್ರಿಕೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರು ಮಾಜಿ ಶಾಸಕ ವೆಂಕಟರಾವ್ ನಾಡಗೌಡರ ಹೆಸರನ್ನು ಉದ್ದೇಶಪೂರ್ವಕವಾಗಿ ಬಿಟ್ಟು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಎಂ.ಲಿಂಗಪ್ಪ ದಢೇಸುಗೂರು ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸರ್ಕಾರಿ ನಿಯಮಾವಳಿಗಳ ಪ್ರಕಾರ ಯಾವುದೇ ಸರ್ಕಾರಿ ಕಾರ್ಯಕ್ರಮಗಳಾಗಲಿ ಮಾಜಿ ಶಾಸಕರು, ಮಾಜಿ ಸಂಸದರು ಹಾಗೂ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಆದರೆ ಶಾಸಕ ಹಂಪನಗೌಡರು ಸರ್ವಾಧಿಕಾರಿ ಮನೋಭಾವನೆ ಹೊಂದಿದ್ದು ಪ್ರತಿಪಕ್ಷದವರನ್ನು ಕಡೆಗಣಿಸುತ್ತಿದ್ದಾರೆ. ಜನಪರವಾಗಿ ಕೆಲಸ ಮಾಡಬೇಕೆಂದು ಭಾಷಣ ಮಾಡುವ ಅವರೇ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡುವುದನ್ನು ಬಿಡುತ್ತಿಲ್ಲ ಎಂದು ಆಪಾದಿಸಿದ್ದಾರೆ.
ಸೌಕರ್ಯಕ್ಕಾಗಿ  ಮನವಿ
ಸಿಂಧನೂರು: ತಾಲೂಕಿನ ಬಳಗಾನೂರು ಹೊರವಲಯದ ಬಸವೇಶ್ವರ ನಗರದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲರಿಗೆ ಶನಿವಾರ ಸಿಪಿಎಂ ಕಾರ್ಯಕರ್ತರು, ಸಿಂಧೂರ ಲಕ್ಷ್ಮಣ ಹಮಾಲರ ಸಂಘದ ಪದಾಧಿಕಾರಿಗಳು ಹಾಗೂ ನಗರದ ನಿವಾಸಿಗಳು ಮನವಿ ಪತ್ರ ಸಲ್ಲಿಸಿದರು.
 ಕುಡಿವ ನೀರು, ಬೀದಿ ದೀಪ, ಪರಿಶಿಷ್ಟ ಜಾತಿ, ಪಂಗಡದವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರ್ಧಕ್ಕೆ ನಿಂತ ಅಂಗನವಾಡಿ ಕೇಂದ್ರ ಕಟ್ಟಡವನ್ನು ಪೂರ್ಣಗೊಳಿಸುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಲ್ಯಾಂಡ್ ಪ್ಲೆಸ್ ಪಾಲಿಸಿ ಪರಿಹಾರ
ಸಿಂಧನೂರು: ನಗರದ ನಿಸರ್ಗ ಜನಶಕ್ತಿ ಆಗ್ರೋಟೆಕ್ ಪ್ರವೇಟ್ ಲಿಮಿಟೆಡ್ ಸಂಸ್ಥೆಯು ತಾಲ್ಲೂಕಿನ ಹೆಡಿಗಿನಾಳ ಗ್ರಾಮದ ನಾರಾಯಣಮ್ಮ ಅವರಿಗೆ ಲ್ಯಾಂಡ್ ಪ್ಲೆಸ್ ಪಾಲಿಸಿಯ 20 ಸಾವಿರ ಮೌಲ್ಯದ ಚೆಕನ್ನು ನೀಡಿತು.ಹೆಚ್.ಕೆ. ರಾಘವ ಶೆಟ್ಟಿ ಹೆಡಿಗಿನಾಳ ಅಪಘಾತದಲ್ಲಿ ಮೃತ ಪಟ್ಟ ಹಿನ್ನೆಲೆಯಲ್ಲಿ ಅವರ ವಾರಸುದಾರರಾದ ಪತ್ನಿ ನಾರಾಯಣಮ್ಮಗೆ ಈ ವಿಮಾ ಹಣದ ಚೆಕ್ ಕಂಪನಿಯ ಸಂಸ್ಥಾಪಕ ಜಿ.ಎಸ್. ಹೂಗಾರ ನೀಡಿದರು.ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್. ತೊಂಡಿಹಾಳ, ಹಿರಿಯ ನಿರ್ದೇಶಕ ಎಂ. ತಿಪ್ಪೆಸ್ವಾಮಿ ಶೆಟ್ಟಿ, ಕಚೇರಿ ವ್ಯವಸ್ಥಾಪಕ ಹುಸೇನಬಾಷಾ, ನಿರ್ದೇಶಕರಾದ ನಾಗರತ್ನಮ್ಮ ಪ್ರಶಾಂತ ನಗರ, ಡಾ. ಕನಕಪ
ಎಸ್‌ಡಿಎಂಸಿಗೆ ಆಯ್ಕೆ
ದೇವದುರ್ಗ: ತಾಲೂಕಿನ ಮಸರಕಲ್ ಗ್ರಾಮದ ಮುರುಘೇಂದ್ರ ಸ್ವಾಮಿ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾಗಿ ಶಿವಾನಂದ ದೊಡ್ಡಮನಿ ಅವಿರೋಧ ಆಯ್ಕೆಯಾಗಿದ್ದಾರೆ. ಪ್ರೌಢಶಾಲೆಯ ಆವರಣದಲ್ಲಿ ನಡೆದ ಸಭೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷರಾಗಿ ಶಿವಾನಂದ ದೊಡ್ಡಮನಿ ಸೇರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು ಎಂದು ಶಾಲೆಯ ಮುಖ್ಯ ಗುರು ಚಂದ್ರಶೇಖರ ಟಿ. ತಿಳಿಸಿದ್ದಾರ . ಸಿದ್ದಯ್ಯ ಸ್ವಾಮಿ ಹಿರೇಮಠ, ವಿರೇಶ ಗೌಡ ಮಾಲಿಪಾಟೀಲ್, ಸಿದ್ದಪ್ಪ ಪೂಜಾರಿ, ಸೈಯದ್ ಬಾಬುಜಾನಿ, ರಂಗಪ್ಪ ಕಲ್ಮನಿ, ಲಿಂಗಪ್ಪ, ಗ್ರಾಪಂ ಸದಸ್ಯ ಅಲಿಪಾಶಾ ಮುಲ್ಲಾ, ಸಣ್ಣ ಲಿಂಗಪ್ಪ ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ
ರಾಯಚೂರು: ತಾಲೂಕಿನ ಸಿಂಗನೋಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮೆರೆದಿದ್ದಾರೆ. ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಗೋಕರಪ್ಪ 3 ಸಾವಿರ ಮೀಟರ್ ಓಟದಲ್ಲಿ ಪ್ರಥಮ, ರಾಧಮ್ಮ ಸಹ 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. 800 ಮೀಟರ್ ಓಟದಲ್ಲಿ ಶಾಲೆಯ ವಿದ್ಯಾರ್ಥಿನಿ ಕಮಲಮ್ಮ ಪ್ರಥಮ ಹಾಗೂ ಟ್ರಿಪಲ್ ಜಂಪ್‌ನಲ್ಲಿ ಗೋಪಾಲ ಪ್ರಥಮ ಸ್ಥಾನ, ಉದ್ದ ಜಿಗಿತದಲ್ಲಿ ಗೋಪಾಲ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಪ್ರಕಟಣೆ ತಿಳಿಸಿದೆ. ಸಂಗಪ್ಪ ಮುದೆನೂರು, ಆದಿಲಕ್ಷ್ಮೀ ಇದ್ದರು.
ಹನುಮಂತಪ್ಪಗೆ
ಡಾಕ್ಟರೇಟ್
ಸಿಂಧನೂರು: ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಹನುಮಂತಪ್ಪಗೆ ಗುಲ್ಬರ್ಗ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಗುಲ್ಬರ್ಗದ ಡಾ. ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ವಿದ್ಯಾಸಾಗರ್  ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.
ಕಾಂಗ್ರೆಸ್‌ಗೆ ನೇಮಕ
ರಾಯಚೂರು: ಜಿಲ್ಲಾ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯಲ್ಲಿ ಖಾಲಿಯಿದ್ದ ಹುದ್ದೆಗಳಿಗೆ ಕೆಪಿಸಿಸಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಗನ್ನಾಥ ಸುಂಕಾರಿ, ಕಾರ್ಯದರ್ಶಿಯಾಗಿ ಶರಣಪ್ಪ ಕಡಗೋಳ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಈ ಬಗ್ಗೆ ನೇಮಕಾತಿ ಆದೇಶ ಹೊರಡಿಸಿದ್ದಾರೆಂದು ಮಾಜಿ ಶಾಸಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಬೋಸರಾಜು ತಿಳಿಸಿದ್ದಾರೆ.
ಪ್ರಶಸ್ತಿಗೆ ಕೃತಿ  ಆಹ್ವಾನ
ರಾಯಚೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ದತ್ತಿಯಿಂದ ಹತ್ತು ಸಾಹಿತ್ಯ ಪ್ರಕಾರಗಳಲ್ಲಿ ರಚಿಸಿದ ಪುಸ್ತಕಗಳಿಗೆ ಅರಳು ಪ್ರಶಸ್ತಿ ನೀಡಲಿದೆ. ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಅ.30 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ದೂರವಾಣಿ ಸಂಖ್ಯೆ 2662584 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.