ರಾಯಚೂರು

ದಲಿತರ ಏಳ್ಗೆಗಾಗಿ ಮೀಸಲಾತಿ ಕಲ್ಪಿಸಿ

Published On :

ಕ.ಪ್ರ. ವಾರ್ತೆ  ರಾಯಚೂರು  ಸೆ.14
ದಲಿತರ ಸರ್ವಾಂಗೀಣ ಏಳಿಗೆಗೆ ಪೂರಕವಾಗಿ ಶಿಕ್ಷಣ, ಭೂಮಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 67 ವರ್ಷ ಗತಿಸಿದರೂ ಜನತೆಯ ಸಮಸ್ಯೆಗಳು ಪರಿಹಾರ ಕಂಡಿಲ್ಲ. ಅಹಿಂದ ವರ್ಗಗಳನ್ನು ಅಧಿಕಾರ ನಡೆಸಿದ ಎಲ್ಲ ಪಕ್ಷಗಳ ಸರ್ಕಾರಗಳು ಇದುವರೆಗೆ ಕಡೆಗಣಿಸುತ್ತಲೇ ಸಾಗಿವೆ ಎಂದು ಆರೋಪಿಸಿದರು.
ಯೋಜನೆ ಲಾಭದಿಂದ ವಂಚಿತ: ರಾಜಕೀಯ ಪಕ್ಷಗಳ ನಾಯಕರು ಸರ್ಕಾರ ಎಸ್ಸಿ, ಎಸ್ಟಿ ಜನಾಂಗದವರ ಪ್ರಗತಿಗೆ ಘೋಷಿಸುವ ಅನೇಕ ಯೋಜನೆಗಳನ್ನು ಜನ ವಿರೋಧಿ ಯೋಜನೆಗಳಾಗಿ ಮಾರ್ಪಾಟು ಮಾಡಲಾಗುತ್ತಿದೆ. ಅಧಿಕಾರಿಗಳೂ ಅಹಿಂದ ವಿರೋಧಿ ಮನೋಭಾವ ಹೊಂದಿದ್ದು ಯೋಜನೆಗಳ ಲಾಭ ಹಿಂದುಳಿದವರಿಗೆ ದೊರೆಯುತ್ತಿಲ್ಲ ಎಂದು ದೂರಿದರು.
ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದು ಅನೇಕರು ಮೂಲ ಹಿಂದುಳಿದವರಿಗೆ ಮೀಸಲಾತಿ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದು, ಅಂಥವರ ವಿರುದ್ಧ ಗೂಂಡಾ ಕಾಯಿದೆ ಜಾರಿಗೆ ತರಬೇಕು. ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ಸೌಲಭ್ಯವನ್ನು ಅಹಿಂದ ವರ್ಗಗಳಿಗೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ: ಅರಣ್ಯ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂಥವರನ್ನು ಒಕ್ಕಲೆಬ್ಬಿಸದೇ ಅವರಿಗೆ ಹಕ್ಕುಪತ್ರ ನೀಡಬೇಕು. ವಿವಿಧ ಯೋಜನೆಗಳಡಿ ಮನೆ ನಿರ್ಮಿಸಿಕೊಂಡವರಿಗೆ ಕೂಡಲೇ ಹಣ ಬಿಡುಗಡೆ ಮಾಡಬೇಕು. ಶೋಷಿತರ ಸರ್ವಾಂಗೀಣ ಪ್ರಗತಿಗೆ ಸ್ಥಾಪಿತ ಸಮಾಜ ಕಲ್ಯಾಣ ಇಲಾಖೆಯನ್ನು ಪುನಾರಚಿಸಬೇಕೆಂದು ಒತ್ತಾಯಿಸಿದರು. ಸಾಮಾಜಿಕ ನ್ಯಾಯದ ಪರಿಕಲ್ಪನೆ  ಸಾಕಾರಗೊಳಿಸುವ ಸದಾಶಿವ ಆಯೋಗದ ವರದಿ ಜಾರಿಗೆ ತರಬೇಕು. ರಾಜ್ಯದಲ್ಲಿ ವಸತಿ ನಿಲಯಗಳ ಸಮಗ್ರ ಸುಧಾರಣೆಯಾಗಬೇಕು. ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ವಸತಿ ನಿಲಯಗಳಲ್ಲಿ ಸೌಲಭ್ಯ ಒದಗಿಸಬೇಕು ಮತ್ತು ವಸತಿ ನಿಲಯಗಳ ಸಂಖ್ಯೆ ಹೆಚ್ಚಿಸಲು ಆಗ್ರಹಿಸಿದರು.  ಎಂ.ಆರ್. ಭೇರಿ, ಹುಲಿಗೆಪ್ಪ ಕೆಸರಟ್ಟಿ, ಎನ್.ಕೆ. ನೆಲಹಾಳ್, ಯಂಕಪ್ಪ ಚಿತ್ತಾಪೂರ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.