ರಾಯಚೂರು

ಸರ್ಕಾರಿ ಕಾರ್ಯಕ್ರಮಗಳು ಕಾಂಗ್ರೆಸ್ ಸಭೆಗಳಾಗದಿರಲಿ

Published On :

ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸರ್ಕಾರಿ ನಿಯಮಗಳ ಪ್ರಕಾರ ಪ್ರೋಟೊಕಾಲ್ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಆಗಮಿಸಿದ್ದಾಗ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಪಕ್ಷದ ಜನಪ್ರತಿನಿಧಿಗಳನ್ನು, ತಮಗೆ ಬೇಕಾದವರನ್ನು ಮಾತ್ರ ಸಭೆಗೆ ಆಹ್ವಾನಿಸಿ ಕಾಂಗ್ರೆಸ್ ಪಕ್ಷದ ಸಭೆಯನ್ನಾಗಿ ಮಾರ್ಪಡಿಸಿದ್ದು ಸರಿಯಲ್ಲ ಎಂದು ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಸಲಹೆ ನೀಡಿದರು.
ಶಾಂತಿನಗರದಲ್ಲಿ (ಹಂಚಿನಾಳಕ್ಯಾಂಪ್) ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವಾಗ ಜಿಲ್ಲಾಧಿಕಾರಿ ಅಂತಿಮ. ಅವರ ಮಾರ್ಗದರ್ಶನದಲ್ಲಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಬೇಕಾದದ್ದು ಅಧಿಕಾರಿಗಳ ಕರ್ತವ್ಯ. ಆದರೆ ಅಧಿಕಾರಿಗಳು ಶಾಸಕರ ಮಾತಿಗೆ ಮನ್ನಣೆ ನೀಡಿ ಅವರ ಪಕ್ಷದ ಮುಖಂಡರನ್ನು ಹಾಗೂ ಜನಪ್ರತಿನಿಧಿಗಳನ್ನು ಮಾತ್ರ ಸಭೆಗಳಿಗೆ ಆಹ್ವಾನಿಸುವುದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಡಿದ ಅಪಮಾನ. ಇಂತಹ ಘಟನೆಗಳು ತಾಲೂಕಿನಲ್ಲಿ ಮುಂದೆ ಘಟಿಸಬಾರದು ಎಂದು ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಇತ್ತೀಚೆಗೆ ಗೊರೇಬಾಳ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ ಹಾಕಲಾದ ಹೈಮಾಸ್ ಲೈಟುಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಜೆಡಿಎಸ್‌ನಿಂದ ಆಯ್ಕೆಯಾದ ರಾಮರಾವ್‌ರನ್ನು ಕರೆಯಲಿಲ್ಲ. ಅಂತೆಯೇ ರಾಗಲಪರ್ವಿಯಲ್ಲಿ ನಡೆದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕ್ರಮದಲ್ಲೂ ಆ ಭಾಗದ ಎಪಿಎಂಸಿ ನಿರ್ದೇಶಕ ಲಿಂಗರಾಜ ಪಾಟೀಲರನ್ನು ಆಹ್ವಾನಿಸಿಲ್ಲ. ಈ ರೀತಿ ಕಾರ್ಯಕ್ರಮಗಳನ್ನು ಆಹ್ವಾನಿಸುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ. ತಾಲೂಕಿನಲ್ಲಿ ಮಾಜಿ ಶಾಸಕರೆಂದರೆ ಕೇವಲ ನಾರಾಯಣಪ್ಪ ಒಬ್ಬರು ಮಾತ್ರವಿಲ್ಲ ಎಂಬುದು ಶಾಸಕ ಹಂಪನಗೌಡರಿಗೆ ನೆನಪಿರಲಿ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.