ರಾಯಚೂರು

ಅನುಮಾನಾಸ್ಪದ ವ್ಯಕ್ತಿಗಳ ಮಾಹಿತಿ ನೀಡಿ

Published On :

ಮುದಗಲ್: ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಅಪರಿಚಿತರು ಮನೆಗಳ ಮುಂದೆ ಕಾಣಿಸಿಕೊಂಡರೆ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಮುಂದಾಗುವ ಕಳ್ಳತನ ಮುಂತಾದ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಸ್ಥಳೀಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಾತ್ರಿ ವೇಳೆಯಲ್ಲಿ ಮನೆಯೊಳಗಡೆ ಬಾಗಿಲಿಗೆ ಕೀಲಿ ಅಳವಡಿಸಿ ಕಳವಾಗುವುದನ್ನು ತಪ್ಪಿಸಬೇಕು. ಮಹಿಳೆಯರು ರಸ್ತೆಯಲ್ಲಿ ಹೋಗುವಾಗ ನಿಮ್ಮ ಹಿಂದೆ ಮುಂದೆ ಅಪರಿಚಿತರ ಬಗ್ಗೆ ಎಚ್ಚರದಿಂದ ಇರಬೇಕು.  ರಾತ್ರೀವೇಳೆ ಗಸ್ತು ತಿರುಗುವ ಪೊಲೀಸರಿಗೆ ಯುವಕರು, ಸಂಘ ಸಂಸ್ಥೆಗಳ ಮುಖಂಡರು ಸಹಕಾರ ನೀಡಬೇಕು. ಪೊಲೀಸರೊಟ್ಟಿಗೆ ಗಸ್ತು ಮಾಡಿ ಸಹಕರಿಸಬೇಕೆಂದು ತಿಳಿಸಿದ್ದಾರೆ.
ವಾಹನಗಳ ಮಾಲೀಕರು ವಾಹನಗಳನ್ನು ಪಾರ್ಕ್ ಮಾಡುವಾಗ ಹ್ಯಾಂಡ್‌ಲಾಕ್ ಮಾಡಬೇಕು. ಅಪರಿಚಿತರು ಯಾವುದೇ ವಸ್ತುಗಳನ್ನು ದಾಖಲೆಗಳಿಲ್ಲದೆ ಮಾರಾಟ ಮಾಡಲು ಬಂದರೆ ಖರೀದಿ ಮಾಡಬೇಡಿ ಎನ್ನುವ ಅನೇಕ ಮಾಹಿತಿಯ ಕರಪತ್ರಗಳನ್ನು ಪಟ್ಟಣದಲ್ಲಿ ಸಾರ್ವಜನಿಕರಿಗೆ ನೀಡಿರುವುದಾಗಿ ಪಿಎಸ್‌ಐ ಸಂಗಪ್ಪ ಶಿವಯೋಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.