ರಾಯಚೂರು

ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ ರಾಯಚೂರು ಸೆ.16
ನ್ಯಾ.ಸದಾಶಿವ ಆಯೋಗದ ವರದಿಯ ಯಥಾವತ್ತು ಜಾರಿಗೆ ಆಗ್ರಹಿಸಿ ನಗರದಲ್ಲಿ ಸೋಮವಾರ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದರು.
ನಗರದ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು, ರಾಜ್ಯದ ಸಿಎಂ ಗೆ ಮನವಿ ಸಲ್ಲಿಸಿ, ಕಳೆದ 16 ವರ್ಷಗಳ ಹೋರಾಟದ ಫಲವಾಗಿ ರಾಜ್ಯದಲ್ಲಿನ ಪರಿಶಿಷ್ಟರಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಸದಾ ಶಿವ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕಳೆದ ಅವಧಿಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ ಆಗಿನ ಸರ್ಕಾರ ವರದಿ ಜಾರಿಗೆ ಆಸಕ್ತಿ ತೋರಲಿಲ್ಲ ಎಂದು ಆರೋಪಿಸಿದರು.
ಮೀಸಲಾತಿ ಅನ್ಯಾಯ: ಇದುವರೆಗೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಹಾಗೂ ಪರಿಶಿಷ್ಟ ವರ್ಗದ ಪಟ್ಟಿಯಲ್ಲಿ 69 ಜಾತಿಯವರನ್ನು ಸೇರಿಸುವ ಮೂಲಕ ಒಟ್ಟು 170 ಜಾತಿಗಳ ಜನರನ್ನು ಮೀಸಲಾತಿ ಪಟ್ಟಿಗೆ ಸೇರಿಸಿದ್ದರಿಂದ ಮಾದಿಗ ಜನಾಂಗಕ್ಕೆ ಅನ್ಯಾಯವಾಗಿದೆ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯಲ್ಲಿ ಒಳಮೀಸಲಾತಿ ನೀಡಿಕೆಗೆ ಅವಕಾಶ ಕಲ್ಪಿಸುವ ಮೂಲಕ ಮಾದಿಗರಿಗೆ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಕಾರಣ ರಾಜ್ಯದ ಸಿಎಂ ಸಿದ್ದರಾಮಯ್ಯ ಕೂಡಲೇ ಸದಾಶಿವ ಆಯೋಗದ ವರದಿ ಯಥಾವತ್ತು ಜಾರಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.