ಇಂದು ಕಾನೂನು ನೆರವು ಸಮಾರಂಭ
ರಾಯಚೂರು: ನಗರದ ಸೇಠ್ ಚುನಿಲಾಲ್ ಅಮರಚಂದ ಬೋಹರಾ ಕಾನೂನು ಮಹಾವಿದ್ಯಾಲಯದಲ್ಲಿ ಸೆ.18 ರಂದು ಕಾನೂನು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9.30ಕ್ಕೆ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ, ಭಟ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಹಾಯಕ ಆಯುಕ್ತೆ ಮಂಜುಶ್ರೀ, ಜಿಲ್ಲಾ ಪೊಲೀಸ್ ಎಎಸ್ಪಿ ಡಾ. ದಿವ್ಯ ಗೋಪಿನಾಥ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷಕ್ಷ ರಾಜಾ ಪಾಂಡುರಂಗ ನಾಯಕ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ತಾರಾನಾಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಮಸ್ಕಿ ನಾಗರಾಜ್ ವಕೀಲರು ವಹಿಸುವರು.
ಕಾಲೇಜಿನ ಆಡಳಿತ ಮಂಡಳಿಯ ಪ್ರಮುಖ ಕೆ.ಶಾಂತಪ್ಪ, ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಜಿ.ಬಸವರಾಜಪ್ಪ ವಕೀಲರು ಉಪಸ್ಥಿತರಿರುವರು. ರ್ಯಾಗಿಂಗ್ ವಿರೋಧಿ ಕಾನೂನು ಕುರಿತು ನ್ಯಾಯವಾದಿ ಮೇರಿ ಡ್ಯಾನಿಯಲ್ ವಿಷಯ ಮಂಡಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

