ಇಂದು ಸ್ವಸಹಾಯ ಸಂಘಗಳ ಉದ್ಘಾಟನೆ
ರಾಯಚೂರು: ನಗರದ ರಾಜೇಂದ್ರ ಗಂಜ್ನಲ್ಲಿ ಸೆ.18ರಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಐಡಿಬಿಐ ಬ್ಯಾಂಕಿನ ಸಹಯೋಗದಲ್ಲಿ ಜಿಲ್ಲೆಯಲ್ಲಿ ರಚಿಸಿದ 1501 ಪ್ರಗತಿ ಬಂಧು ಸ್ವಸಹಾಯ ಸಂಘಗಳ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿದೆ. ಧರ್ಮಸ್ಥಳ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಬೆಳಗ್ಗೆ 10.30ಕ್ಕೆ ಸ್ವಸಹಾಯ ಸಂಘಗಳನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ಶಾಸಕ ಡಾ. ಶಿವರಾಜ್ ಪಾಟೀಲ್ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸ್ಮಾರ್ಟ್ ಕಾರ್ಡು ವಿತರಿಸಲಿದ್ದಾರೆ. ಪ್ರಗತಿ ನಿಧಿ ಸಾಲವನ್ನು ಬ್ಯಾಂಕಿನ ಇಡಿ ಎಸ್.ಕೆ.ವಿ. ಶ್ರೀನಿವಾಸನ್ ವಿತರಿಸುವರು. ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಸ್ವಸಹಾಯ ಸಂಘಗಳಿಗೆ ದಾಖಲೆ ತರಿಸುವರು. ಮುಖ್ಯ ಅತಿಥಿಗಳಾಗಿ ವೆಂಕಟೇಶ ನಾಯಕ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶಂಕ್ರಪ್ಪ, ಜಿಲ್ಲಾಧಿಕಾರಿ ನಾಗರಾಜು, ಎಸ್ಪಿ ಎಂ.ಎನ್. ನಾಗರಾಜ, ಜಿಪಂ ಅಧ್ಯಕ್ಷೆ ಲಲಿತಮ್ಮ ಉಪಸ್ಥಿತರಿರುವರು.
ಸ್ಮಾರ್ಟ್ ಕಾರ್ಡ್ ವಿತರಣೆ
ಸಿಂಧನೂರು: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಿಂಧನೂರು ಹಾಗೂ ಐಡಿಬಿಐ ಬ್ಯಾಂಕ್ ಮುಂಬೈ ಇವರ ಸಹಯೋಗದೊಂದಿಗೆ ಪ್ರಗತಿ ಬಂಧು ಗುಂಪುಗಳಿಗೆ ಕೃಷಿ ಸಲಕರಣೆ, ಸ್ವಸಹಾಯ ಸಂಘಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭ 18ರಂದು ನಗರದ ಸತ್ಯಾಗಾರ್ಡ್ನ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸುವರು. ಸಹಕಾರ ಸಚಿವ ಹೆಚ್.ಎಸ್. ಮಹಾದೇವ ಪ್ರಸಾದ್ ಕೃಷಿ ಉಪಕರಣ ವಿತರಿಸುವರು. ಪ್ರಗತಿನಿಧಿ ವಿತರಣೆಯನ್ನು ಮುಂಬೈ ಐಡಿಬಿಐ ಬ್ಯಾಂಕ್ನ ಮುಖ್ಯ ಮಹಾಪ್ರಬಂಧಕ ರಘುನಂದನ್ ಬಗಲ್ವಾಡಿ ನೆರವೇರಿಸುವರು. ಲೋಕಸಭಾ ಸದಸ್ಯ ಶಿವರಾಮಗೌಡ ಸ್ಮಾಟರ್ಕಾಡರ್ ವಿತರಣೆ ನಡೆಸುವರು. ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ದಾಖಲಾತಿ ವಿತರಣೆ ನೆರವೇರಿಸುವರು. ಹಲವರು ಉಪಸ್ಥಿತರಿರುವರು.
ಸದಾಶಿವ ಆಯೋಗ
ವರದಿ ಜಾರಿಗೆ ಒತ್ತಾಯ
ರಾಯಚೂರು: ಮಾದಿಗ ಜನಾಂಗಕ್ಕೆ ಒಳಮೀಸಲಾತಿ ನೀಡಿಕೆ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಸೇರಿ ಮತ್ತಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ಸಂಘಟನೆ ಗುಲ್ಬರ್ಗಾ ವಿಭಾಗೀಯ ಅಧ್ಯಕ್ಷ ಕೆ.ಎಸ್. ನಾಗರಾಜ್, ಜಿಲ್ಲಾಧ್ಯಕ್ಷ ರಾಘವೇಂದ್ರ ಬೋರೆಡ್ಡಿ, ಉಪಾಧ್ಯಕ್ಷರಾದ ಶಿವರಾಜ್ ಹೊಸಪೇಟೆ, ಬಸವರಾಜ್ ಹೇಮಗಡ್ಡಿ, ಸಂಚಾಲಕ ಶಿವಶಂಕರ್, ಚಂದ್ರಶೇಖರ್ ಭಂಡಾರಿ, ಶಿವಪ್ಪ, ತಿಮ್ಮಾರೆಡ್ಡಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

