ರಾಯಚೂರು

ಯೋಜನೆಯಡಿ 3 ಸಾವಿರ ಕೋಟಿ ವ್ಯವಹಾರ: ಡಾ. ವೀರೇಂದ್ರ ಹೆಗ್ಗಡೆ

Published On :

ಕನ್ನಡಪ್ರಭ ವಾರ್ತೆ, ಸಿಂಧನೂರು, ಸೆ.18
ಸುಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ 29 ಲಕ್ಷ ಸ್ವಸಹಾಯ ಸಂಘಗಳ ಸದಸ್ಯರಿದ್ದು 3 ಸಾವಿರ ಕೋಟಿ ವಹಿವಾಟು ನಡೆಯುತ್ತಿದೆ. ಶೇ.99.18 ಮರುಪಾವತಿಯಾಗಿದ್ದು ಮಹಿಳೆಯರು ಸ್ಮಾರ್ಟ್‌ಕಾರ್ಡ್ ಮೂಲಕ ಯೋಜನೆಯ ಸಂಪೂರ್ಣ ಲಾಭ ಪಡೆದಿದ್ದಾರೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ನಗರದ ಸತ್ಯ ಗಾರ್ಡನ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಪ್ರಗತಿಬಂಧು ಗುಂಪುಗಳಿಗೆ ಕೃಷಿ ಸಕಲರಣೆ ಹಾಗೂ ಸ್ವಸಹಾಯ ಸಂಘಗಳಿಗೆ ಸ್ಮಾರ್ಟ್‌ಕಾರ್ಡ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪುರುಷರಿಗೆ ಪ್ರಗತಿಬಂಧು ಗುಂಪು: ಮಹಿಳೆಯರು ಸ್ವಸಹಾಯ ಸಂಘಗಳನ್ನು ಮಾಡುವ ಮೂಲಕ ಆರ್ಥಿಕ ನೆರವು ಪಡೆದು ಸ್ವಾವಲಂಬಿಗಳಾಗಬೇಕು. ಅದೇ ರೀತಿ ಪುರುಷರಿಗೆ ಪ್ರಗತಿಬಂಧು ಗುಂಪುಗಳನ್ನು ಮಾಡಿ ಅವರಿಗೂ ಆರ್ಥಿಕ ನೆರವು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಪೀಠೋಪಕರಣ ಕೊಡುವ ಯೋಚನೆಯಿದೆ. ಈಗಾಗಲೇ ಹೈನುಗಾರಿಕೆಗೆ 36 ಲಕ್ಷ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೆರವು ನೀಡಲಾಗಿದೆ ಎಂದು ವಿವರಿಸಿದರು.
ಬಡತನ ನಿವಾರಣೆಗಾಗಿ: ದುರ್ಗೆ, ಸರಸ್ವತಿ ಮತ್ತು ಲಕ್ಷ್ಮೀ ಸ್ವರೂಪದಲ್ಲಿರುವ ಮಹಿಳೆಯರು ಸಂಸ್ಕೃತಿ, ಧರ್ಮ, ಸಂಸಾರದ ರಕ್ಷಕರಾಗಿ ಕಾರ್ಯನಿರ್ವಹಣೆ ಮಾಡುತ್ತಾ ಬಂದಿದ್ದು ಚಂಚಲವಾದ ಲಕ್ಷ್ಮೀಯ ಅಭಾವದಿಂದ ಕುಟುಂಬಗಳು ಬಡತನ ಅನುಭವಿಸುತ್ತಿರುವುದನ್ನು ಗುರುತಿಸಿ ತಾವು ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿರುವುದಾಗಿ ತಿಳಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಸಂಸದ ಶಿವರಾಮಗೌಡ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ, ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿದರು. ಅಧ್ಯಕ್ಷತೆಯನ್ನು ಶಾಸಕ ಬಾದರ್ಲಿ ಹಂಪನಗೌಡ ವಹಿಸಿದ್ದರು.
ಐಡಿಬಿಐ ಮುಖ್ಯ ಮಹಾಪ್ರಬಂಧಕ ಪ್ರಗತಿನಿಧಿ ವಿತರಿಸಿದರು. ಮಾನ್ವಿ ಶಾಸಕ ಹಂಪಯ್ಯ ನಾಯಕ, ಕಾಂಗ್ರೆಸ್ ಮುಖಂಡ ಎಸ್.ಲಿಂಗರಾಜ, ಕೆಜೆಪಿ ಮುಖಂಡ ರಾಜಶೇಖರ ಪಾಟೀಲ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಡಾ. ಎಲ್.ಎಚ್. ಮಂಜುನಾಥ, ನಗರಸಭೆ ಅಧ್ಯಕ್ಷ ಜಾಫರ್ ಅಲಿ ಜಾಗಿರದಾರ, ತಾಪಂ ಅಧ್ಯಕ್ಷ ಬಸಮ್ಮ ಕೊಟ್ರಪ್ಪ, ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್ ಉಪಸ್ಥಿತರಿದ್ದರು. ಎಂ.ಭಾಸ್ಕರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.