ಕೃಷಿ ಯಂತ್ರಗಳ ಅಕ್ರಮ ಮಾರಾಟ: ಪ್ರತಿಭಟನೆ
ದೇವದುರ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಹಿಂದುಳಿದ ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಯಡಿ ಕೃಷಿ ಇಲಾಖೆಯಿಂದ ನೀಡಬೇಕಾದ ಕೃಷಿ ಯಂತ್ರೋಪಕರಣಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಆರೋಪಿಸಿ ಪ್ರತಿಭಟನೆ ನಡೆಸಿದರು. ಪಟ್ಟಣದ ಕೃಷಿ ಇಲಾಖೆಯ ಎದುರು ಗುರುವಾರ ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಯಂತ್ರೋಪಕರಣಗಳು, ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಮಂಜೂರು ಮಾಡಲಾಗುತ್ತದೆ. ತಾಲೂಕಿನ ಕೃಷಿ ಇಲಾಖೆಯಲ್ಲಿ ಅಂಥ ಸೌಲಭ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆಂದು ಟೀಕಿಸಿದರು. ಗ್ರಾಮೀಣ ಭಾಗದಲ್ಲಿ ಪರವಾನಿಗೆ ಇಲ್ಲದೆ ವಿವಿಧ ಕಂಪನಿಗಳ ಕಳಪೆ ಮಟ್ಟದ ಬೀಜ, ಗೊಬ್ಬರ, ಕ್ರಿಮಿನಾಶಕಗಳನ್ನು ಬಹಿರಂಗವಾಗಿ ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆ. ಅಕ್ರಮಗಳಲ್ಲಿ ಶಾಮೀಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಂಘದ ತಾಲೂಕು ಅಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಹೈದ್ರಾಬಾದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗೌರವಾಧ್ಯಕ್ಷ ಶಿವಪ್ಪ ಬಲಿದ್, ಶಿವಪ್ಪ ಬಾವಿಮನಿ, ಸದಾಶಿವ ಗೋಪಾಳಪುರ, ದುರಗಣ್ಣ ಇರಬಗೇರಾ, ಖಾಜಾಹುಸೇನ, ಮೌನೇಶ ಇತರರಿದ್ದರು.
ಬೈಕ್ ಮೇಲೆ
ಪ್ರಯೋಗಾಲಯ
ರಾಯಚೂರು: ನಗರದ ಹಾಷ್ಮಿಯಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ದ್ವಿಚಕ್ರ ವಾಹನದ ಮೇಲೆ ಪ್ರಯೋಗಾಲಯ ಎಂಬ ವಿನೂತನ ಕಾರ್ಯಕ್ರಮ ಆಯೋ ಜಿಸಲಾಗಿತ್ತು. ಆಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದಿಂದ ಆಯೋಜಿಸಿದ್ದ ಕಾರ್ಯಕ್ರಮ ಬಿಇಒ ಮಲ್ಲಿಕಾರ್ಜುನ ಉದ್ಘಾಟಿಸಿದರು. ದೈಹಿಕ ಶಿಕ್ಷಣಾಧಿಕಾರಿ ಬೋರಡ್ಡಿ, ನಾಗಪ್ಪ ಹೊರಪ್ಯಾಟಿ, ವಿಜಯಕುಮಾರ, ಮೈಲಾರಪ್ಪ ಮತ್ತಿತರರಿದ್ದರು.
ಲಾಲಸಾಬ ಪರಾಪೂರ
ಸಿಂಧನೂರು: ತಾಲೂಕಿನ ಪರಾಪೂರದ ಗುತ್ತೇದಾರ ಲಾಲಸಾಬ (48) ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಆರು ಜನ ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಪರಾಪೂರ ಗ್ರಾಮದಲ್ಲಿ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

