ನಾಳೆ ಶಿಕ್ಷಕರ ಸಮ್ಮೇಳನ, ಸನ್ಮಾನ
ರಾಯಚೂರು: ಬಸವ ಸಾಂಸ್ಕೃತಿಕ ವೇದಿಕೆಯಿಂದ ಸೆ.21ರಂದು ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಶಿವಬಸಪ್ಪ ಮಾಲಿಪಾಟೀಲ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ರಂಗಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ಸಮ್ಮೇಳನವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶಂಕ್ರಪ್ಪ ಉದ್ಘಾಟಿಸಲಿದ್ದು, ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಆಶಯ ಭಾಷಣ ಮಾಡಲಿದ್ದಾರೆಂದು ಹೇಳಿದರು. ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಮಾಜಿ ಶಾಸಕ ಪಾಪಾರೆಡ್ಡಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯು ಕಳೆದ ಐದು ವರ್ಷಗಳಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದು, ಸಮ್ಮೇಳನದಲ್ಲಿ ಜಿಲ್ಲೆಯ 28 ಜನ ಶಿಕ್ಷಕರನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯ ದರೂರು ಬಸವರಾಜ ಪಾಟೀಲ್, ಶಿವಮೂರ್ತಿ ಸೇರಿ ಅನೇಕರಿದ್ದರು.
ಕ್ರೀಡಾಪಟುಗೆ ಸದೃಢ ದೇಹ ಅವಶ್ಯ: ಕರಂಡಿ
ಸಿಂಧನೂರು: ಯುವಕರು ಸದೃಢವಾದ ದೇಹ ಹೊಂದಲು ಪ್ರತಿಯೊಬ್ಬರು ಉತ್ತಮ ಕ್ರೀಡಾಪಟುವಾಗಬೇಕೆಂದು ತಾಲೂಕ ದೈಹಿಕ ಶಿಕ್ಷಣದ ಅಧಿಕಾರಿ ಎನ್.ಬಿ. ಕರಂಡಿ ಕರೆ ನೀಡಿದರು. ತಾಲೂಕ ಕ್ರೀಡಾಂಗಣದಲ್ಲಿ ಫ್ರೌಡಶಾಲೆಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕ್ರೀಡೆಯಲ್ಲಿ ವಿಜೇತರಾದ ಮಕ್ಕಳು ರಾಜ್ಯಮಟ್ಟದಲ್ಲಿ ಹೆಸರು ಗಳಿಸಬೇಕೆಂದು ಹೇಳಿದರು. ನಂತರ ವಿಜಯಶಾಲಿಗಳಿಗೆ ಬಹುಮಾನ ವಿತರಿಸಿದರು. ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್. ಹಿರೇಮಠ, ಶಿಕ್ಷಕರಾದ ರಾಮಣ್ಣ ಉಳ್ಳಾಗಡ್ಡಿ,ಬಸವಲಿಂಗಪ್ಪ, ಹುಸೇನಬಾಷ, ಅಮರಯ್ಯಸ್ವಾಮಿ, ಪಂಪನಗೌಡ, ಮೈನುದ್ದೀನ್, ಶಾಂತಕುಮಾರ, ವಿರುಪಾಕ್ಷಿ, ಚಂದಪ್ಪ, ವೀರೇಶ, ಆಂಜನೇಯ ಇದ್ದರು.
ಜಿಲ್ಲಾ ಮಟ್ಟಕ್ಕೆ
ಹನುಮೇಶ ಆಯ್ಕೆ
ಸಿಂಧನೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಎಂ.ಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಹನುಮೇಶ 600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಆಯ್ಕೆಯಾದ ವಿದ್ಯಾರ್ಥಿಯನ್ನು ಅಧ್ಯಕ್ಷ ಡಾ. ಎಸ್.ವಿ. ಪಾಟೀಲ್, ಕಾರ್ಯದರ್ಶಿ ಅಮರಪ್ಪ ಮೈಲಾರ, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ, ಎಲ್ಲ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

