ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ
ರಾಯಚೂರು: ನಗರದ ಮನ್ಸಲಾಪುರ ರಸ್ತೆಯು ತೀರಾ ಹದಗೆಟ್ಟಿದ್ದು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರವೇ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಮನ್ಸಲಾಪುರ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ತಗ್ಗುಗಳಾಗಿದ್ದು, ಅವುಗಳನ್ನು ಮುಚ್ಚುವತ್ತ ನಿರ್ಲಕ್ಷ್ಯ ತೋರಿದೆ. ಕಳಪೆ ಕಾಮಗಾರಿಯಿಂದಾಗಿ ಮನ್ಸಲಾಪುರ ರಸ್ತೆಯು ಹಾಳಾಗಿದ್ದು, ಅದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸವಾರರು ಪರದಾಡುವಂತಾಗಿದೆ ಎಂದು ಆರೋಪಿಸಿದರು.
ಬಸವೇಶ್ವರ ರಸ್ತೆಯಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯು ವಿಳಂಬವಾಗಿದ್ದು, ಪರ್ಯಾಯ ಮಾರ್ಗವಾಗಿ ಬಳಕೆಯಾಗುತ್ತಿರುವ ಮನ್ಸಲಾಪುರ ರಸ್ತೆಯಲ್ಲಿ ಸರಕು ಹೊತ್ತ ವಾಹನಗಳು ಸಂಚರಿಸುತ್ತಿವೆ. ಅದರಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ಜಿಲ್ಲಾಡಳಿತ ಅಸಡ್ಡೆ ತೋರಿದೆ ಎಂದು ಆರೋಪಿಸಿದರು. ಕಾರಣ ಕೂಡಲೇ ಮನ್ಸಲಾಪುರ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

