ರಾಯಚೂರು

ಶಿಕ್ಷಕರಲ್ಲಿ ಸಮಾಜ ತಿದ್ದುವ ಶಕ್ತಿ: ನ್ಯಾ. ರಾಯಣ್ಣವರ್

Published On :

ಸಿಂಧನೂರು: ಶಿಕ್ಷಕರ ಕೆಲಸ ಕೇವಲ ವಿದ್ಯಾರ್ಥಿಗಳನ್ನು ತಿದ್ದುವುದು ಮಾತ್ರವಲ್ಲ. ಅವರಿಗೆ ಸಮಾಜವನ್ನು ತಿದ್ದುವ ಶಕ್ತಿ ಹಾಗೂ ಜವಾಬ್ದಾರಿ ಇದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ರಾಯಣ್ಣವರ್ ಹೇಳಿದರು.
ಜಗನ್ಮಾತ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾನೂನಿನ ಅರಿವು ಎಲ್ಲರಿಗೂ ಇರಬೇಕಾದದ್ದು ಅವಶ್ಯಕ. ಕಾನೂನನ್ನು ಯಾರೇ ಉಲ್ಲಂಘಿಸಲಿ ಅವರು ಎಷ್ಟೇ ದೊಡ್ಡವರಾಗಿರಲಿ ಅವರಿಗೆ ಶಿಕ್ಷೆ ತಪ್ಪದು. ಕಾನೂನಿನ ಅರಿವಿಲ್ಲವೆಂದು ತಪ್ಪನ್ನು ಮಾಡಿದರೆ ಕಾನೂನು ಅವರನ್ನು ಕ್ಷಮಿಸುವುದಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರ, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಅವರಿಗೆ ಸಾಮಾನ್ಯ ಕಾನೂನುಗಳ ಮಾಹಿತಿ ಇರಬೇಕು. ಅದರಿಂದ ವಿದ್ಯಾರ್ಥಿಗಳಿಗೆ ತಿಳಿಸಲು ಸಹಾಯಕವಾಗುತ್ತದೆ. ಕಾನೂನಿನ ಅಜ್ಞಾನ ಅಕ್ಷಮ್ಯ ಅಪರಾಧ ಎಂದು ಹೇಳಿದರು.
ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಹ್ಲಾದ ಗುಡಿ ಮಾತನಾಡಿದರು. ನ್ಯಾಯವಾದಿಗಳಾದ ಜೆ. ರಾಯಪ್ಪ, ಹೆಚ್. ವೀರಭದ್ರಪ್ಪ ವಿವಿಧ ವಿಷಯಗಳ ಕುರಿತು ಉಪನ್ಯಾಸ ಮಂಡಿಸಿದರು. ವಕೀಲರ ಸಂಘದ ಮಾಜಿ ಕಾರ್ಯದರ್ಶಿ ಖಾಜಿ ಮಲಿಕ್ ಅಹ್ಮದ ವಕೀಲರು ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ತಿಮ್ಮನಗೌಡ, ನ್ಯಾಯಾಧೀಶರು, ವಕೀಲರು ತಮ್ಮ ಸಂಸ್ಥೆಗೆ ಆಗಮಿಸಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕಾನೂನಿನ ಅರಿವನ್ನು ಮೂಡಿಸಿರುವುದು ಅಭಿನಂದನಾರ್ಹ. ಇಂತಹ ಕಾರ್ಯಕ್ರಮಗಳು ಸಾರ್ವಜನಿಕರಿಗೂ ಉಪಯುಕ್ತವಾಗುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ರಾಯಣ್ಣವರ್ ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಅತಿಥಿಗಳನ್ನು, ಉಪನ್ಯಾಸಕರನ್ನು ಸಂಸ್ಥೆಯ ಅಧ್ಯಕ್ಷರು ಸನ್ಮಾನಿಸಿದರು. ಕು.ಶಿಲ್ಪಾ, ಸುರೇಖಾ ಪ್ರಾರ್ಥಿಸಿದರು. ಶಿಕ್ಷಕ ಮಲ್ಲಿಕಾರ್ಜುನ ನಿರೂಪಿಸಿ, ಶಿಕ್ಷಕ ವೈ.ಬಿ. ಚಳ್ಳಮರದ ವಂದಿಸಿದರು. ಶಾಲೆಯ ಮುಖ್ಯಗುರು ದಯಾನಂದ ಸೇರಿದಂತೆ ಶಾಲಾ ಸಿಬ್ಬಂದಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.