ಇಂಗ್ಲಿಷ್ ಬೋಧಕರ ನೇಮಕಕ್ಕೆ ಆಗ್ರಹ
ರಾಯಚೂರು: ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಇಂಗ್ಲಿಷ್ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹಿಸಿ ಈಚೆಗೆ ಸಮಾನ ಶಾಲಾ ಶಿಕ್ಷಣಕ್ಕಾಗಿ ಜನಾಂದೋಲನ ಸಂಘಟನೆಯಿಂದ ಸರ್ವಶಿಕ್ಷಣ ಅಭಿಯಾನ ಯೋಜನೆಯ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಈ ಕುರಿತು ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು 2013ರ ಜು.22 ರಂದು ಡಿಡಿಪಿಐ ಅವರಿಗೆ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಮನವಿ ಮಾಡಲಾಗಿತ್ತು. ಆದರೆ ಅವರು ಈ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆಂದು ಆರೋಪಿಸಿದರು. ಜಿಲ್ಲೆಯ 60 ಶಾಲೆಗಳಲ್ಲಿ ಇಂಗ್ಲೀಷ್, ಗಣಿತ, ವಿಜ್ಞಾನ ಭಾಷೆಗಳನ್ನು ಬೋಧಿಸಲು ಶಿಕ್ಷಕರಿಲ್ಲ. ಉಚಿತ, ಕಡ್ಡಾಯ ಶಿಕ್ಷಣದಡಿಯಲ್ಲಿ 8ನೇ ತರಗತಿ ಒಳಪಡುತ್ತಿದ್ದು, ಶಿಕ್ಷಕರಿಲ್ಲದಿರುವುದು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ. ತಕ್ಷಣ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೂಡಲೇ 60 ಶಾಲೆಗಳಿಗೆ ಇಂಗ್ಲಿಷ್ ಬೋಧಕರನ್ನು ನೇಮಿಸಲು ಅವಕಾಶ ಕಲ್ಪಿಸುವಂತೆ ಸಂಘಟನೆಯ ಸಂಚಾಲಕ ಅಂಬಣ್ಣ ಅರೋಲಿ, ಸೈಯದ್ ಹಫೀಜುಲ್ಲಾ, ವಿದ್ಯಾ ಪಾಟೀಲ್ ಮತ್ತಿತರರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

