ರಾಯಚೂರು

ಸಾಲ ನೀಡಿಕೆಯಲ್ಲಿ ಬ್ಯಾಂಕ್ಗಳಿಂದ ರೈತರ ಕಡೆಗಣನೆ: ಅಮರಣ್ಣ ಆರೋಪ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಸೆ.22
ಕೇಂದ್ರ ವಾಣಿಜ್ಯ ಬ್ಯಾಂಕುಗಳು ಸಾಲ ಸೌಲಭ್ಯ ನೀಡಿಕೆಯಲ್ಲಿ ರೈತರನ್ನು ಕಡೆಗಣಿಸುತ್ತಿದ್ದು, ಕೇವಲ ಶ್ರೀಮಂತರಿಗೆ ಮಣೆ ಹಾಕುತ್ತಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 2009ರಿಂದ ನೆರೆ, ಬರಗಾಲದಿಂದ ತತ್ತರಿಸಿದ ರೈತರಿಗೆ ಉತ್ತೇಜನ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇವಾ ಸಹಕಾರ ಸಂಘಗಳ ಮೂಲಕ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಹಾಗೂ ಕೇಂದ್ರ ವಾಣಿಜ್ಯ ಬ್ಯಾಂಕುಗಳ ಮೂಲಕ ಶೇ.3ರ ಬಡ್ಡಿದರದಲ್ಲಿ 3 ಲಕ್ಷದವರೆಗೆ ಸಾಲ ನೀಡುವುದಾಗಿ ಹೇಳುತ್ತವೆ.
ವಿಫಲ: ವಾಣಿಜ್ಯ ಬ್ಯಾಂಕುಗಳಲ್ಲಿ ಕಾರು, ಗೃಹ ಸೇರಿ ಇನ್ನಿತರೆ ಸಾಲ ಸೌಲಭ್ಯಗಳ ಮಾಹಿತಿ ಫಲಕ ಹಾಕಲಾಗಿದೆ ಹೊರತು ಒಣಬೇಸಾಯ, ನೀರಾವರಿ ಜಮೀನುಗಳಿಗೆ ಎಷ್ಟು ಸಾಲ ನೀಡಲಾಗುತ್ತದೆ ಎಂಬ ಮಾರ್ಗಸೂಚಿ ಇರುವುದಿಲ್ಲ. ಬ್ಯಾಂಕುಗಳು ರೈತರಿಗೆ ಸಾಲ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಸೇವಾ ಸಹಕಾರ ಸಂಘಗಳು ದೊಡ್ಡವರ ಕೈಗೊಂಬೆಯಾಗಿವೆ. ಮುದಗಲ್ ಗ್ರಾಮೀಣ ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಸಾಲ ನೀಡದೆ ರೈತರ ಮೇಲೆ ಗಧಾಪ್ರಹಾರ ನಡೆಸುತ್ತಾರೆ ಎಂದು ಆಪಾದಿಸಿದರು.
ರೈತರಿಗೆ ಅನುಚಿತ ವರ್ತನೆ: ಗ್ರಾಮೀಣ ಪ್ರದೇಶದ ರೈತರಿಗೆ ಅನುಕೂಲವಾಗಲೆಂದು ಸ್ಥಾಪಿಸಿದ ಗ್ರಾಮೀಣ ಬ್ಯಾಂಕುಗಳು ಶಾಖಾ ವ್ಯವಸ್ಥಾಪಕರು ರೈತರ ಬಗ್ಗೆ ಅನುಚಿತವಾಗಿ ವರ್ತಿಸುತ್ತಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬ್ಯಾಂಕುಗಳ ಮುಂದೆ ರೈತರ ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ತಿಪ್ಪಣ್ಣ ಯಲಗಲದಿನ್ನಿ, ಅಮರಯ್ಯ ಹುಲಿಗುಡ್ಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.