ರಾಯಚೂರು

ಶೈಕ್ಷಣಿಕ ಪ್ರಗತಿಗೆ ಶ್ರಮಿಸಿ: ವೆಂಕಟೇಶ್

Published On :

ದೇವದುರ್ಗ:  ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯು ಪ್ರಗತಿ ಸಾಧಿಸಬೇಕಿದ್ದು, ಸರ್ಕಾರದ ಶಿಕ್ಷಣ ಕೇಂದ್ರಗಳ ಜತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಕಾರವೂ ಈ ನಿಟ್ಟಿನಲ್ಲಿ ಅಗತ್ಯ ಎಂದು ಶಾಸಕ ಎ. ವೆಂಕಟೇಶ ನಾಯಕ ತಿಳಿಸಿದರು.
ಅವರು ಭಾನುವಾರ ಸಂಜೆ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಖಾಸಗಿ ಶಾಲಾ-ಕಾಲೇಜುಗಳ ಅತ್ಯುತ್ತಮ ಬೋಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಎಲ್ಲ ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಹಿಂದುಳಿಯುವಿಕೆಯನ್ನು ನಿವಾರಿಸಲು ಸರ್ಕಾರದ ಶಾಲಾ ಕಾಲೇಜುಗಳ ಜತೆಜತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಮನವಿ ಮಾಡಿದರು.
ಸೌಲಭ್ಯಗಳು: ಹೈ.ಕ. ಭಾಗಕ್ಕೆ 371ನೇ ಕಲಂ ಅಡಿ ವಿಶೇಷ ಸ್ಥಾನಮಾನ ಜಾರಿ ನಂತರ ಎಲ್ಲ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಉದ್ಯೋವಕಾಶ ಮತ್ತಿತರೆ ಸೌಲಭ್ಯಗಳು ದೊರೆಯಲಿದ್ದು, ಅದರಿಂದ ಈ ಪ್ರದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಹೇಳಿದರು. ದೇವದುರ್ಗ ತಾಲೂಕಿನ ಶಿಕ್ಷಣ ಪ್ರೇಮಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಭೂದಾನ ಮಾಡಿದ ಮುರಿಗೆಪ್ಪ ಸಾಹು ಖೇಣದ ಪುತ್ರ ಪ್ರಕಾಶ ಖೇಣದ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಹಾಜಿ ಮಲಂಗ್ ಬಾಬಾ ಸೇರಿ ಶಾಲಾ ಕಾಲೇಜಗಳ ಅತ್ಯುತ್ತಮ ಬೋಧಕರನ್ನು ಈ ವೇಳೆ ಸನ್ಮಾನಿಸಲಾಯಿತು.
ಸಾನ್ನಿಧ್ಯವನ್ನು ಜಯಶಾಂತೇಶ್ವರ ಶಿವಾಚಾರ್ಯ ಸ್ವಾಮಿ, ಗಬ್ಬೂರಿನ ಬೂದಿಬಸವೇಶ್ವರ ಶಿವಾಚಾರ್ಯ ಸ್ವಾಮಿ ವಹಿಸಿದ್ದರು. ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವಂತ್ರಾಯ ಕುರಿ, ವಿ.ಎಂ. ಮೇಟಿ, ದೇವದುರ್ಗ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ವೆಂಕಟೇಶ ನೀಲಗಲ್ ವಕೀಲರು ಮಾತನಾಡಿದರು.
ತಿರುಪತಿ ಸೂಗೂರು, ಒಕ್ಕೂಟಗಳ ಅಧ್ಯಕ್ಷ ಚಂದ್ರಶೇಖರ ಬಲ್ಲಟಗಿ, ಮುರಳಿಧರ, ಚನ್ನಪ್ಪ ಬೂದಿನಾಳ, ಉಪನ್ಯಾಸಕ ಸುಭಾಸಚಂದ್ರ ಪಾಟೀಲ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.