ರಾಯಚೂರು

ನಾಳೆಯಿಂದ ಅಹವಾಲು ಸ್ವೀಕಾರ

Published On :

ರಾಯಚೂರು: ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸೆ.25ರಿಂದ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ. ಸೆ.25ರಂದು ಬೆಳಗ್ಗೆ 10ಕ್ಕೆ ದೇವದುರ್ಗ ಪ್ರವಾಸಿ ಮಂದಿರ, ಸೆ.26ರಂದು ಬೆಳಗ್ಗೆ 10ಕ್ಕೆ ಸಿಂಧನೂರು ಪ್ರವಾಸಿ ಮಂದಿರ, ಸೆ. 27ರಂದು ಬೆಳಗ್ಗೆ 10ಕ್ಕೆ ಮಾನ್ವಿ ಪ್ರವಾಸಿ ಮಂದಿರ ಹಾಗೂ ಸೆ.30ರಂದು ಬೆಳಗ್ಗೆ 10ಕ್ಕೆ ಲಿಂಗಸ್ಗೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ದೂರು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಲೋಕಾಯುಕ್ತರ ಕಚೇರಿಯನ್ನು 08532-223592 ಮತ್ತು 223579 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
ಬೈಕ್ನಿಂದ
ಬಿದ್ದು ಸಾವು
ರಾಯಚೂರು: ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಹಳ್ಳದ ಬಳಿ ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ವೇಳೆ ಸಾವಿಗೀಡಾಗಿದ್ದಾನೆ. ಮೃತನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ಬೈಕ್ ಮೇಲೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ಡಾಗಿ ಇಲ್ಲವೇ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಈತ ಬೈಕ್ ನಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗೆ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಶಿಶುಪಾಲನಾ ಭತ್ಯೆಗೆ ಅರ್ಜಿ
ರಾಯಚೂರು: ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ದೃಷ್ಟಿಹೀನ ಮಹಿಳೆಯರಿಗೆ ಪ್ರತಿ ಹೆರಿಗೆಯ ನಂತರ 2 ವರ್ಷಗಳ ಅವಧಿಗೆ ಮಾಸಿಕ ಶಿಶುಪಾಲನಾ ಭತ್ಯೆ ನೀಡಲಾಗುತ್ತಿದ್ದು ಅರ್ಜಿ ಕರೆಯಲಾಗಿದೆ. ಪ್ರತಿ ತಿಂಗಳು 2 ಸಾವಿರ ಶಿಶುಪಾಲನಾ ಭತ್ಯೆಯನ್ನು ಮಂಜೂರು ಮಾಡಲಾಗುವುದು. ಭತ್ಯೆಯೂ ಕೆಲ ಷರತ್ತು ಗಳಿಗೊಳಪಟ್ಟಿರುತ್ತದೆ. ಶಿಶುಪಾಲನಾ ಭತ್ಯೆ ಎರಡು ಹೆರಿಗೆಗೆ ಮಾತ್ರ ಸಿಮೀತವಾಗಿದೆ. ಅರ್ಜಿ ನಮೂನೆ ಮತ್ತು ಇತರೆ ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ರಾಯಚೂರು ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.